ಬುಧವಾರ, ಜೂನ್ 29, 2022
24 °C

IPL: ಸಂಜು ಸ್ಯಾಮ್ಸನ್ ರಾಜಸ್ಥಾನ್ ಪರ ಅತ್ಯಧಿಕ ರನ್ ಗಳಿಸಿದ ಬ್ಯಾಟರ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅತ್ಯಧಿಕ ರನ್ ಗಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಸಂಜು ಸ್ಯಾಮ್ಸನ್ ಭಾಜನರಾಗಿದ್ದಾರೆ. 

ಐಪಿಎಲ್ 2022 ಟೂರ್ನಿಯಲ್ಲಿ ರಾಜಸ್ಥಾನ್ ತಂಡವನ್ನು ಮುನ್ನಡೆಸುತ್ತಿರುವ ಸಂಜು, ಕೋಲ್ಕತ್ತದ ಈಡನ್ ಗಾರ್ಡನ್ ಮೈದಾನದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಪ್ಲೇ-ಆಫ್‌ನ ಮೊದಲ ಕ್ವಾಲಿಫೈಯರ್‌‌ ಪಂದ್ಯದಲ್ಲಿ ಸ್ಮರಣೀಯ ಸಾಧನೆ ಮಾಡಿದರು. 

ಇದನ್ನೂ ಓದಿ: 

ರಾಜಸ್ಥಾನ್ ರಾಯಲ್ಸ್ ಪರ 108 ಪಂದ್ಯಗಳನ್ನು ಆಡಿರುವ ಸಂಜು 29.91ರ ಸರಾಸರಿಯಲ್ಲಿ ಒಟ್ಟು 2,812 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಶತಕ ಹಾಗೂ 14 ಅರ್ಧಶತಕಗಳು ಸೇರಿವೆ. 

ರಾಜಸ್ಥಾನ್ ಪರ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಸಾಲಿನಲ್ಲಿ ಅಜಿಂಕ್ಯ ರಹಾನೆ (2,810) ದಾಖಲೆಯನ್ನು ಸಂಜು ಮುರಿದಿದ್ದಾರೆ. ಈ ಪಟ್ಟಿಯಲ್ಲಿ ಶೇನ್ ವಾಟ್ಸನ್ 2,372 ಜೋಸ್ ಬಟ್ಲರ್ 2,159 ಹಾಗೂ ರಾಹುಲ್ ದ್ರಾವಿಡ್ 1,276 ರನ್ ಗಳಿಸಿದ್ದಾರೆ.  

2016-17ನೇ ಸಾಲಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಸಂಜು ಆಡಿದ್ದರು. ಈ ಮೂಲಕ ಐಪಿಎಲ್‌ನಲ್ಲಿ 29.32ರ ಸರಾಸರಿಯಲ್ಲಿ ಒಟ್ಟು 3,489 ರನ್ ಗಳಿಸಿದ್ದಾರೆ. 

ಪ್ರಸಕ್ತ ಸಾಲಿನಲ್ಲಿ ರಾಜಸ್ಥಾನ್ ಪರ ಸಂಜು, 15 ಪಂದ್ಯಗಳಲ್ಲಿ 30.07ರ ಸರಾಸರಿಯಲ್ಲಿ 421 ರನ್ ಗಳಿಸಿದ್ದಾರೆ. 150.35ರ ಸ್ಟ್ರೈಕ್‌ರೇಟ್ ಕಾಯ್ದುಕೊಂಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು