ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2022: ರಾಜಸ್ಥಾನ್ ವಿರುದ್ಧ ಟಾಸ್‌ ಗೆದ್ದ ಹೈದರಾಬಾದ್‌ ಫೀಲ್ಡಿಂಗ್ ಆಯ್ಕೆ

Last Updated 29 ಮಾರ್ಚ್ 2022, 13:53 IST
ಅಕ್ಷರ ಗಾತ್ರ

‍ಪುಣೆ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ 15ನೇ ಆವೃತ್ತಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿರುವರಾಜಸ್ಥಾನ್ ರಾಯಲ್ಸ್ ಹಾಗೂ ಸನ್‌ರೈಸರ್ಸ್‌ ಹೈದರಾಬಾದ್ ತಂಡಗಳು ಮಂಗಳವಾರ ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.

ಮಹಾರಾಷ್ಟ್ರ ರಾಜ್ಯ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಸನ್‌ರೈಸರ್ಸ್ ಹೈದರಾಬಾದ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಅನುಭವಿ ನಾಯಕ ಕೇನ್ ವಿಲಿಯಮ್ಸನ್ ಅವರು ಸನ್‌ರೈಸರ್ಸ್‌ನ ಬ್ಯಾಟಿಂಗ್ ವಿಭಾಗದ ಚುಕ್ಕಾಣಿಯನ್ನೂ ಹಿಡಿದಿದ್ದಾರೆ. ಗ್ಲೆನ್ ಫಿಲಿಪ್ಸ್‌, ನಿಕೋಲಸ್ ಪೂರನ್, ಪ್ರಿಯಂ ಗರ್ಗ್‌ ಮತ್ತು ರಾಹುಲ್ ಟ್ರಿಪಾಠಿ ಅವರಿಂದಲೂ ಉತ್ತಮ ಪ್ರದರ್ಶನ ಕಾಣುವ ನಿರೀಕ್ಷೆ ಇದೆ.

ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ್ ಕುಮಾರ್ ಅವರಿಗೆ ವೇಗದ ಬೌಲರ್ ಉಮ್ರನ್ ಮಲಿಕ್, ಎಡಗೈ ವೇಗಿ ಟಿ.ನಟರಾಜನ್, ಸ್ಪಿನ್ನರ್‌ಗಳಾದ ವಾಷಿಂಗ್ಟನ್ ಸುಂದರ್, ಶ್ರೇಯಸ್ ಗೋಪಾಲ್ ಮತ್ತು ಜೆ.ಸುಚಿತ್ ಅವರ ಬೆಂಬಲವಿದೆ.

ರಾಜಸ್ಥಾನ್ ರಾಯಲ್ಸ್‌ ತಂಡದನಾಯಕ ಸಂಜು ಸ್ಯಾಮ್ಸನ್ ಅವರ ಮೇಲೆ ಬ್ಯಾಟಿಂಗ್ ವಿಭಾಗ ಭರವಸೆ ಇರಿಸಿಕೊಂಡಿದೆ. ಆದರೆ ಅನಿಶ್ಚಿತತೆಯು ಅವರ ಬ್ಯಾಟಿಂಗ್‌ನ ದೌರ್ಬಲ್ಯವಾಗಿದ್ದು ಅದರಿಂದ ಹೊರಬರಲು ಪ್ರಯತ್ನಿಸಬೇಕಾಗಿದೆ.

ದೇವದತ್ತ ಪಡಿಕ್ಕಲ್ ಮತ್ತು ಜೋಸ್ ಬಟ್ಲರ್ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ. ಶಿಮ್ರಾನ್ ಹೆಟ್ಮೆಯರ್, ರಸಿ ವ್ಯಾನ್ ಡೆರ್ ಡುಸೆನ್, ಜಿಮ್ಮಿ ನೀಶಮ್, ರಯಾನ್ ಪರಾಗ್ ಮುಂತಾದವರ ಬಲ ರಾಜಸ್ಥಾನ್ ರಾಯಲ್ಸ್‌ ತಂಡಕ್ಕಿದೆ.

ಬೌಲಿಂಗ್‌ನಲ್ಲಿ ಆಫ್‌ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮತ್ತು ಲೆಗ್ ಸ್ಪಿನ್ನರ್ ಯಜುವೇಂದ್ರ ಚಾಹಲ್ ಬಲವಿದೆ.

ತಂಡಗಳು ಇಂತಿವೆ

ಸನ್‌ರೈಸರ್ಸ್ ಹೈದರಾಬಾದ್:
ಕೇನ್ ವಿಲಿಯಮ್ಸನ್‌, ನಿಕೋಲಸ್ ಪೂರನ್‌, ರಾಹುಲ್ ತ್ರಿಪಾಠಿ, ಅಭಿಷೇಕ್ ಶರ್ಮಾ, ಏಡನ್ ಮರ್ಕರಂ, ಅಬ್ದುಲ್ ಸಮದ್‌, ವಾಷಿಂಗ್ಟನ್ ಸುಂದರ್, ರೊಮಾರಿಯೊ ಶೆಫ‌ರ್ಡ್‌, ಭುವನೇಶ್ವರ ಕುಮಾರ್‌, ಟಿ. ನಟರಾಜನ್, ಉಮ್ರಾನ್ ಮಲಿಕ್‌

ರಾಜಸ್ಥಾನ್ ರಾಯಲ್ಸ್‌: ಸಂಜು ಸ್ಯಾಮ್ಸನ್‌, ಜೋಸ್ ಬಟ್ಲರ್‌, ಯಶಸ್ವಿ ಜೈಸ್ವಾಲ್‌, ದೇವದತ್ತ ಪಡಿಕ್ಕಲ್, ಶಿಮ್ರೊನ್ ಹೆಟ್ಮೆಯರ್, ರಿಯಾನ್ ಪರಾಗ್‌, ಆರ್. ಅಶ್ವಿನ್, ಯಜುವೇಂದ್ರ ಚಾಹಲ್, ನೇಥನ್ ಕೌಲ್ಟರ್‌ ನೈಲ್‌, ಟ್ರೆಂಟ್ ಬೌಲ್ಟ್, ಪ್ರಸಿದ್ಧ ಕೃಷ್ಣ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT