ಮುಂಬೈ: ಅಭಿಷೇಕ್ ಶರ್ಮಾ ಉತ್ತಮ ಬ್ಯಾಟಿಂಗ್ ನೆರವಿನಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಪಂಜಾಬ್ ವಿರುದ್ಧ ಸ್ಪರ್ಧಾತ್ಮಕ ಮೊತ್ತ ಪೇರಿಸಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 157 ರನ್ ಗಳಿಸಿದೆ.

ಅಭಿಷೇಕ್ ಶರ್ಮಾ 43, ರೊಮಾರಿಯೊ ಶೆಫರ್ಡ್ 26, ವಾಷಿಂಗ್ಟನ್ ಸುಂದರ್ 25 ರನ್ ಗಳಿಸಿ ತಂಡಕ್ಕೆ ಆಸರೆಯಾದರು.

ಇತ್ತ ಪಂಜಾಬ್ ಪರ ನಾಥನ್ ಎಲ್ಲಿಸ್, ಹರ್ಪ್ರೀತ್ ಬ್ರಾರ್ ತಲಾ 3 ಪಡೆದರೆ, ಕಗಿಸೊ ರಬಾಡ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಈಗಾಗಲೇ ಪ್ಲೇ ಆಫ್‌ನಲ್ಲಿ ರೇಸ್‌ನಿಂದ ಹೊರಬಿದ್ದಿರುವ ಉಭಯ ತಂಡಗಳು ಈ ಪಂದ್ಯದಲ್ಲಿ ಸಮಾಧಾನಕರ ಗೆಲುವಿಗಾಗಿ ಪೈಪೋಟಿ ನಡೆಸುತ್ತಿವೆ.

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಉಭಯ ತಂಡಗಳು ಆಡಿರುವ 13 ಪಂದ್ಯಗಳಲ್ಲಿ ತಲಾ 6ರಲ್ಲಿ ಗೆಲುವು ಸಾಧಿಸಿದ್ದು, 7 ಪಂದ್ಯಗಳಲ್ಲಿ ಸೋಲು ಕಂಡಿವೆ. ಪಾಯಿಂಟ್ಸ್ ಪಟ್ಟಿಯಲ್ಲಿ ಕ್ರಮವಾಗಿ 7 ಮತ್ತು 8ನೇ ಸ್ಥಾನದಲ್ಲಿವೆ. ಟೂರ್ನಿ ಆರಂಭದಿಂದ ಸ್ಥಿರ ಪ್ರದರ್ಶನ ನೀಡಲು ಉಭಯ ತಂಡಗಳು ವಿಫಲಗೊಂಡಿವೆ.

ಸದ್ಯ ಬ್ಯಾಟಿಂಗ್ ಆರಂಭಿಸಿರುವ ಪಂಜಾಬ್ 2 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 22 ರನ್ ಗಳಿಸಿದೆ. ಜಾನಿ ಬೆಸ್ಟೊ, ಶಿಖರ್ ಧವನ್ ಕ್ರೀಸ್‌ನಲ್ಲಿದ್ದಾರೆ.

ಓದಿ...ದಕ್ಷಿಣ ಆಫ್ರಿಕಾ ವಿರುದ್ಧದ ಟಿ–20 ಸರಣಿಗೆ ಟೀಮ್ ಇಂಡಿಯಾ ಪ್ರಕಟ: ರಾಹುಲ್ ನಾಯಕ

ಓದಿ... IPL 2022 | ಪಂಜಾಬ್ ವಿರುದ್ಧ ಟಾಸ್ ಗೆದ್ದ ಹೈದರಾಬಾದ್; ಬ್ಯಾಟಿಂಗ್ ಆಯ್ಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.