ಶುಕ್ರವಾರ, ಮೇ 20, 2022
21 °C

ಮುಂಬೈ ಗಾಯದ ಮೇಲೆ ಬರೆ; ಗಾಯಾಳು ಸೂರ್ಯಕುಮಾರ್ ಟೂರ್ನಿಯಿಂದ ಔಟ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2022ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಉಳಿದಿರುವ ಪಂದ್ಯಗಳಲ್ಲಿ ಗಾಯಾಳು ಸೂರ್ಯಕುಮಾರ್ ಯಾದವ್ ಆಟದಿಂದ ಮುಂಬೈ ಇಂಡಿಯನ್ಸ್ ವಂಚಿತವಾಗಿದೆ.

ಇದರೊಂದಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಎಡಗೈ ನೋವು ಅನುಭವಿಸುತ್ತಿರುವ ಸೂರ್ಯಕುಮಾರ್ ಅವರಿಗೆ ವಿಶ್ರಾಂತಿ ಸೂಚಿಸಲಾಗಿದೆ.

ಇದನ್ನೂ ಓದಿ: 

ಮೇ 6ರಂದು ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಸೂರ್ಯಕುಮಾರ್‌ಗೆ ಗಾಯವಾಗಿತ್ತು.

ಬಿಸಿಸಿಐ ವೈದ್ಯಕೀಯ ತಂಡದೊಂದಿಗೆ ಸಮಾಲೋಚಿಸಿ ವಿಶ್ರಾಂತಿ ಸೂಚಿಸಲಾಗಿದೆ ಎಂದು ಮುಂಬೈ ಇಂಡಿಯನ್ಸ್ ಟ್ವೀಟ್ ಮೂಲಕ ತಿಳಿಸಿದೆ.

 

 

 

ಸೂರ್ಯಕುಮಾರ್ ಆಡಿರುವ ಎಂಟು ಪಂದ್ಯಗಳಲ್ಲಿ 43.29 ಸರಾಸರಿಯಲ್ಲಿ 303 ರನ್ ಗಳಿಸಿದ್ದಾರೆ. ಇದರಲ್ಲಿ ಮೂರು ಅರ್ಧಶತಕಗಳು ಸೇರಿವೆ.

 

ಅತ್ತ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ಪ್ಲೇ-ಆಫ್ ಕನಸು ಭಗ್ನಗೊಂಡಿದೆ. 10 ಪಂದ್ಯಗಳಲ್ಲಿ ಎರಡು ಗೆಲುವು ಮಾತ್ರ ಗಳಿಸಿದ್ದು, ನಾಲ್ಕು ಅಂಕಗಳನ್ನು ಹೊಂದಿದೆ.

ಈಗ ಉಳಿದಿರುವ ನಾಲ್ಕು ಪಂದ್ಯಗಳಲ್ಲಿ ಮುಂಬೈಗೆ ಸೂರ್ಯಕುಮಾರ್ ಅಲಭ್ಯತೆ ಕಾಡಲಿದೆ. ಸೋಮವಾರ ನಡೆಯುತ್ತಿರುವ ಪಂದ್ಯದಲ್ಲಿ ಮುಂಬೈ ತಂಡವು ಕೋಲ್ಕತ್ತ ನೈಟ್ ರೈಡರ್ಸ್ ಸವಾಲನ್ನು ಎದುರಿಸುತ್ತಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು