ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2022: 157kmph - ದಾಖಲೆ ಬರೆದ ಉಮ್ರಾನ್ ಮಲಿಕ್

ಅಕ್ಷರ ಗಾತ್ರ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಇತಿಹಾಸದಲ್ಲೇ ಅತಿ ವೇಗದ ಬೌಲಿಂಗ್ ಮಾಡಿದ ಭಾರತೀಯ ಬೌಲರ್ ಎಂಬ ದಾಖಲೆಗೆ ಉಮ್ರಾನ್ ಮಲಿಕ್ ಭಾಜನರಾಗಿದ್ದಾರೆ.

ಐಪಿಎಲ್ 2022 ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಆಡುತ್ತಿರುವ ಉಮ್ರಾನ್, ಗುರುವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಸಾಧನೆ ಮಾಡಿದರು.

ತಮ್ಮ ನಾಲ್ಕು ಓವರ್‌ಗಳಲ್ಲಿ 52 ರನ್ ಬಿಟ್ಟುಕೊಟ್ಟಿದ್ದ ಉಮ್ರಾನ್, ಒಂದು ವಿಕೆಟ್ ಪಡೆಯಲಾರದೇ ದುಬಾರಿಯೆನಿಸಿದ್ದರು. ಆದರೆ ಗಂಟೆಗೆ 157 ಕಿ.ಮೀ. ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಯುವ ವೇಗಿ ಉಜ್ವಲ ಭವಿಷ್ಯದ ಭರವಸೆ ನೀಡಿದ್ದಾರೆ. ಆದರೆ ಈ ಎಸೆತವನ್ನು ರೋಮ್ಮನ್ ಪೊವೆಲ್ ಬೌಂಡರಿಗೆ ಅಟ್ಟಿದ್ದರು.

ಪ್ರಸಕ್ತ ಸಾಲಿನ ಐಪಿಎಲ್‌ನಲ್ಲೂ ಅತಿ ವೇಗದ ಬೌಲಿಂಗ್ ಮಾಡಿರುವ ಉಮ್ರಾನ್, ತಮ್ಮದೇ ದಾಖಲೆಯನ್ನು ಉತ್ತಮಪಡಿಸಿದ್ದಾರೆ. ಇದೇ ಪಂದ್ಯದಲ್ಲಿ ಗಂಟೆಗೆ 156 ಕಿ.ಮೀ. ವೇಗದಲ್ಲೂ ಬೌಲಿಂಗ್ ಮಾಡಿದ್ದರು.

ಇವರು ಆಸ್ಟ್ರೇಲಿಯಾದ ಮಾಜಿ ವೇಗಿ ಶಾನ್ ಟೈಟ್ (157.3kmph) ನಂತರದ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ.

ಭಾರತದ ಮಾಜಿ ವೇಗದ ಬೌಲರ್ ಜಾವಗಲ್ ಶ್ರೀನಾಥ್ 1997ರಲ್ಲಿ ಜಿಂಬಾಬ್ವೆ ವಿರುದ್ಧ ಗಂಟೆಗೆ 157 ಕಿ.ಮೀ. ವೇಗದಲ್ಲಿ ಬೌಲಿಂಗ್ ಮಾಡಿದ್ದರು. ಈ ದಾಖಲೆಯನ್ನು ಉಮ್ರಾನ್ ಸರಿಗಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT