ಬುಧವಾರ, ಮೇ 25, 2022
30 °C

IPL 2022: ಐಪಿಎಲ್‌ನಲ್ಲಿ ಮಗದೊಂದು ಮೈಲಿಗಲ್ಲು ಸ್ಥಾಪಿಸಿದ ಕಿಂಗ್ ಕೊಹ್ಲಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮಗದೊಂದು ಮೈಲಿಗಲ್ಲು ಸ್ಥಾಪಿಸಿದ್ದು, 6,500 ರನ್ ಗಳಿಸಿದ್ದಾರೆ. 

ಈ ಮೂಲಕ ಐಪಿಎಲ್ ಇತಿಹಾಸದಲ್ಲೇ 6,500 ರನ್ ಗಳಿಸಿದ ಮೊದಲ ಬ್ಯಾಟರ್ ಎಂಬ ಕೀರ್ತಿಗೆ ಕಿಂಗ್ ಕೊಹ್ಲಿ ಭಾಜನರಾಗಿದ್ದಾರೆ. 

ಇದನ್ನೂ ಓದಿ: 

ಐಪಿಎಲ್ 2022 ಟೂರ್ನಿಯಲ್ಲಿ ಶುಕ್ರವಾರ ಬ್ರೆಬೊರ್ನ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ದ ನಡೆಯುತ್ತಿರುವ ಪಂದ್ಯದಲ್ಲಿ ವಿರಾಟ್ ಸ್ಮರಣೀಯ ಸಾಧನೆ ಮಾಡಿದರು. 

ಐಪಿಎಲ್‌ನಲ್ಲಿ 220ನೇ ಪಂದ್ಯದ 212ನೇ ಇನ್ನಿಂಗ್ಸ್‌ನಲ್ಲಿ ಕೊಹ್ಲಿ 36.21ರ ಸರಾಸರಿಯಲ್ಲಿ ಒಟ್ಟು 6,519 ರನ್ ಗಳಿಸಿದ್ದಾರೆ. ಇದರಲ್ಲಿ ಐದು ಶತಕ ಹಾಗೂ 43 ಅರ್ಧಶತಕಗಳು ಸೇರಿವೆ. ಇನ್ನು 215 ಸಿಕ್ಸರ್ ಹಾಗೂ 568 ಬೌಂಡರಿಗಳನ್ನು ಸಿಡಿಸಿದ್ದಾರೆ. 129.26ರ ಸ್ಟ್ರೈಕ್‌ರೇಟ್ ಕಾಪಾಡಿಕೊಂಡಿದ್ದು, ಇನ್ನಿಂಗ್ಸ್‌ವೊಂದರಲ್ಲಿ ಗರಿಷ್ಠ ಸ್ಕೋರ್ 113 ಆಗಿದೆ.  

ಟಿ20 ಕ್ರಿಕೆಟ್‌ನಲ್ಲಿ 10,500 ರನ್ ಸಾಧನೆ...
ಈ ನಡುವೆ ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ ವಿರಾಟ್ ಕೊಹ್ಲಿ 10,500 ರನ್‌ಗಳ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಮುನ್ನಡೆಯಲ್ಲಿರುವ ವೆಸ್ಟ್‌ ಇಂಡೀಸ್‌ನ ಕ್ರಿಸ್ ಗೇಲ್ ಒಟ್ಟು 14,562 ರನ್ ಗಳಿಸಿದ್ದಾರೆ. 

ಮುಂದುವರಿದ ವೈಫಲ್ಯ...
ಆದರೂ ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ವಿರಾಟ್ ಬ್ಯಾಟಿಂಗ್ ವೈಫಲ್ಯ ಮುಂದುವರಿಯಿತು. ಉತ್ತಮ ಆರಂಭ ಪಡೆದರೂ ಅದನ್ನು ದೊಡ್ಡ ಮೊತ್ತವಾಗಿ ಪರಿವರ್ತಿಸಲು ಕೊಹ್ಲಿಗೆ ಸಾಧ್ಯವಾಗಲಿಲ್ಲ. 

14 ಎಸೆತಗಳನ್ನು ಎದುರಿಸಿದ ವಿರಾಟ್ ಎರಡು ಸಿಕ್ಸರ್ ಹಾಗೂ ಒಂದು ಬೌಂಡರಿ ನೆರವಿನಿಂದ 20 ರನ್ ಗಳಿಸಿ ಔಟ್ ಆದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು