ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೂನ್ಯಕ್ಕೆ ಔಟ್ ಆದ ಬಳಿಕ ಲಾರಾ ಜೊತೆಗೆ ಕೊಹ್ಲಿ ಮಾತುಕತೆ - ಚಿತ್ರ ವೈರಲ್

Last Updated 24 ಏಪ್ರಿಲ್ 2022, 14:16 IST
ಅಕ್ಷರ ಗಾತ್ರ

ಮುಂಬೈ: ಐಪಿಎಲ್ 2022 ಟೂರ್ನಿಯಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ತೋರಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ, ಸತತ ಎರಡನೇ ಪಂದ್ಯದಲ್ಲಿ ಗೋಲ್ಡನ್ ಡಕ್ ಔಟ್ ಆಗಿದ್ದಾರೆ.

ಕಳೆದ ಕೆಲವು ಸಮಯಗಳಿಂದ ಕೊಹ್ಲಿ ಅವರ ಕಳಪೆ ಆಟ ಮುಂದುವರಿದಿದ್ದು, ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ.

ಈ ನಡುವೆ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದ ಬಳಿಕ ವೆಸ್ಟ್ ಇಂಡೀಸ್‌ನ ದಿಗ್ಗಜ ಬ್ರಿಯಾನ್ ಲಾರಾ ಅವರೊಂದಿಗೆ ವಿರಾಟ್ ಮಾತುಕತೆ ನಡೆಸಿದ್ದಾರೆ.

ಈ ಸಂಬಂಧ ಚಿತ್ರಗಳನ್ನು ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್ ಫ್ರಾಂಚೈಸ್, ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬಿಡುಗಡೆ ಮಾಡಿದೆ.

ವಿಂಡೀಸ್‌ನ ಮಾಜಿ ನಾಯಕ ಲಾರಾ, ಬ್ಯಾಟಿಂಗ್ ಬಗ್ಗೆ ವಿರಾಟ್‌ಗೆ ಅಮೂಲ್ಯ ಸಲಹೆಗಳನ್ನು ಕೊಟ್ಟಿದ್ದಾರೆ. ಇದು ವಿರಾಟ್‌ಗೆ ಬ್ಯಾಟಿಂಗ್ ಲಯ ಕಂಡುಕೊಳ್ಳಲು ನೆರವಾಗಲಿದೆ ಎಂದುನಿರೀಕ್ಷಿಸಲಾಗಿದೆ.

ತಮ್ನ ಸ್ನೇಹಿತ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರೊಂದಿಗೆ ವಿರಾಟ್ ಮಾತುಕತೆ ನಡೆಸಿದ್ದಾರೆ. ಬಳಿಕ ಹೈದರಾಬಾದ್ ತಂಡದ ಯುವ ಆಟಗಾರರಿಗೂ ಸಲಹೆಗಳನ್ನುನೀಡಿದರು.

ಏತನ್ಮಧ್ಯೆ ಎಸ್‌ಆರ್‌ಎಚ್ ವಿರುದ್ಧದ ಪಂದ್ಯದಲ್ಲಿ ಕೇವಲ 68 ರನ್ನಿಗೆ ಆಲೌಟ್ ಆಗಿರುವ ಆರ್‌ಸಿಬಿ, ಒಂಬತ್ತು ವಿಕೆಟ್ ಅಂತರದ ಹೀನಾಯ ಸೋಲಿಗೆ ಶರಣಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT