ಬುಧವಾರ, ಮೇ 18, 2022
28 °C

ಸಿಎಸ್‌ಕೆ 97ಕ್ಕೆ ಆಲೌಟ್; ರೈನಾ ಅವರನ್ನು ಟ್ರೋಲ್ ಮಾಡಿದ ಯುವಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಐಪಿಎಲ್ 2022 ಟೂರ್ನಿಯಲ್ಲಿ ಗುರುವಾರ ವಾಂಖೆಡೆ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕೇವಲ 97 ರನ್ನಿಗೆ ಆಲೌಟ್ ಆಗಿತ್ತು.

ಇದಕ್ಕೆ ಸಂಬಂಧಿಸಿದಂತೆ ಸಿಎಸ್‌ಕೆ ಮಾಜಿ ಆಟಗಾರ ಸುರೇಶ್ ರೈನಾ ಅವರನ್ನು ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಟ್ರೋಲ್ ಮಾಡಿದ್ದಾರೆ.

ಇದನ್ನೂ ಓದಿ: 

ಈ ಕುರಿತು ಇನ್‌ಸ್ಟಾಗ್ರಾಂ ಸ್ಟೋರಿಸ್‌ನಲ್ಲಿ ಯುವಿ ವಿಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

ಒಳಾಂಗಣ ಕ್ರೀಡಾಂಗಣದಲ್ಲಿ ಫುಟ್‌ಬಾಲ್ ಪಂದ್ಯ ವೀಕ್ಷಿಸುತ್ತಿದ್ದ ವೇಳೆ ರೈನಾ ಅವರಿಗೆ 'ಇಂದು (ಗುರುವಾರ) ರಾತ್ರಿ ನಿಮ್ಮ ತಂಡ 97 ರನ್ನಿಗೆ ಆಲೌಟ್ ಆಗಿದೆ. ನೀವೇನು ಹೇಳುತ್ತೀರಿ ?' ಎಂದು ಯುವಿ ಪ್ರಶ್ನೆ ಮಾಡಿದ್ದಾರೆ.

ಇದಕ್ಕೆ ಉತ್ತರಿಸಿರುವ ರೈನಾ, 'ನಾನು ಪಂದ್ಯದ ಭಾಗವಾಗಿರಲಿಲ್ಲ' ಎಂದು ಹೇಳಿದ್ದಾರೆ.

 

 

 

ಯುವಿ ಹಾಗೂ ರೈನಾ ಉತ್ತಮ ಗೆಳೆತನವನ್ನು ಹೊಂದಿದ್ದಾರೆ. ಈ ಹಿಂದೆ ಟೀಮ್ ಇಂಡಿಯಾ ಪರ ಜೊತೆಯಾಗಿ ಆಡಿದ್ದರಲ್ಲದೆ ಅನೇಕ ಸ್ಮರಣೀಯ ಗೆಲುವುಗಳಲ್ಲಿ ಭಾಗಿಯಾಗಿದ್ದಾರೆ.

 

'ಮಿಸ್ಟರ್ ಐಪಿಎಲ್' ಖ್ಯಾತಿಯ ರೈನಾ, ಚೆನ್ನೈ ಯಶಸ್ಸಿನಲ್ಲೂ ಮಹತ್ವದ ಪಾತ್ರ ವಹಿಸಿದ್ದಾರೆ. ಆದರೆ ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ರೈನಾ ಅವರನ್ನು ಖರೀದಿಸಲು ಸಿಎಸ್‌ಕೆ ಹಿಂದೇಟು ಹಾಕಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು