ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2023: ಇಂದು 250ನೇ ಪಂದ್ಯ ಆಡಲಿರುವ ‘ಕ್ಯಾಪ್ಟನ್ ಕೂಲ್’, ಎಲ್ಲರ ಚಿತ್ತ ಧೋನಿಯತ್ತ

Published 28 ಮೇ 2023, 11:32 IST
Last Updated 28 ಮೇ 2023, 11:32 IST
ಅಕ್ಷರ ಗಾತ್ರ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿಯು ಈಗ ಕೊನೆಯ ಹಂತ ತಲುಪಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಸಂಜೆ ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್‌ ತಂಡಗಳು ಪ್ರಶಸ್ತಿಗಾಗಿ ಹೋರಾಟ ನಡೆಸಲಿವೆ.

ಸಿಎಸ್‌ಕೆ ತಂಡದ ನಾಯಕ ‘ಕ್ಯಾಪ್ಟನ್ ಕೂಲ್’ ಧೋನಿ ಅವರು 250ನೇ ಪಂದ್ಯವನ್ನು ಆಡಲಿದ್ದು, ಅಭಿಮಾನಿಗಳ ಚಿತ್ತ ಅವರತ್ತ ನೆಟ್ಟಿದೆ.

ಧೋನಿ, ಐಪಿಎಲ್‌ನಲ್ಲಿ ಹೆಚ್ಚು ಪಂದ್ಯಗಳನ್ನು ಆಡಿದ ಮೊದಲ ಆಟಗಾರ ಎನಿಸಿದ್ದಾರೆ. ಜತೆಗೆ, ಐಪಿಎಲ್ ಫೈನಲ್‌ನಲ್ಲಿ ಆಟಗಾರನಾಗಿ ಮತ್ತು ನಾಯಕನಾಗಿ ಹೆಚ್ಚು ಕಾಣಿಸಿಕೊಂಡ ಹೆಗ್ಗಳಿಕೆ ಅವರದ್ದು.

ಧೋನಿ ಆಡಿರುವ 249 ಪಂದ್ಯಗಳ ಪೈಕಿ 219 ಪಂದ್ಯಗಳು ಚೆನ್ನೈ ಸೂಪರ್ ಕಿಂಗ್ಸ್ ಪರ ಮತ್ತು ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಪರ 30 ಪಂದ್ಯಗಳನ್ನು ಆಡಿದ್ದಾರೆ. ಧೋನಿ 2016 ಮತ್ತು 2017ರಲ್ಲಿ ಪುಣೆ ತಂಡದ ಸದಸ್ಯರಾಗಿದ್ದರು. ಇನ್ನು ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರರ ಪಟ್ಟಿಯಲ್ಲಿ ಧೋನಿ ಮೊದಲ ಸ್ಥಾನದಲ್ಲಿದ್ದಾರೆ. ನಂತರ ರೋಹಿತ್ ಶರ್ಮಾ (243) ಎರಡನೇ ಸ್ಥಾನದಲ್ಲಿದ್ದಾರೆ. ದಿನೇಶ್ ಕಾರ್ತಿಕ್ (242) ಮೂರನೇ ಸ್ಥಾನದಲ್ಲಿದ್ದು, ವಿರಾಟ್ ಕೊಹ್ಲಿ (237) ನಾಲ್ಕನೇ ಸ್ಥಾನದಲ್ಲಿದ್ದಾರೆ.

ಧೋನಿ, ಐಪಿಎಲ್‌ನಲ್ಲಿ ಈವರೆಗೆ 135.96 ಸರಾಸರಿಯಲ್ಲಿ ಒಟ್ಟು 5,082 ರನ್‌ಗಳನ್ನು ಗಳಿಸಿದ್ದಾರೆ. 84 ರನ್‌ ಗಳಿಸಿದ್ದು ಧೋನಿಯವರ ಗರಿಷ್ಠ ಸ್ಕೋರ್ ಆಗಿದೆ. ಜತೆಗೆ 24 ಅರ್ಧಶತಕಗಳನ್ನು ದಾಖಲಿಸುವ ಮೂಲಕ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಏಳನೇ ಆಟಗಾರರೆನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT