ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2023: ಬಟ್ಲರ್ ಅರ್ಧಶತಕ, ಚೆನ್ನೈಗೆ 176 ರನ್ ಗುರಿ ನೀಡಿದ ರಾಜಸ್ಥಾನ ರಾಯಲ್ಸ್

Last Updated 12 ಏಪ್ರಿಲ್ 2023, 16:05 IST
ಅಕ್ಷರ ಗಾತ್ರ

ಚೆನ್ನೈ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ (ಐಪಿಎಲ್‌) 17ನೇ ಪಂದ್ಯದಲ್ಲಿ ಬುಧವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್‌ ಬೃಹತ್ ಮೊತ್ತ ಪೇರಿಸಿದೆ.

ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ ರಾಯಲ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿದೆ.

ಜೋಸ್‌ ಬಟ್ಲರ್ 52, ದೇವದತ್ ಪಡಿಕ್ಕಲ್ 38, ಆರ್ ಅಶ್ವಿನ್ 30, ಶಿಮ್ರೋನ್ ಹೆಟ್ಮೆಯರ್ ಔಟಾಗದೆ 30 ರನ್ ಗಳಿಸಿದ ತಂಡಕ್ಕೆ ಆಸರೆಯಾದರು. ನಿರೀಕ್ಷೆ ಮೂಡಿಸಿದ್ದ ಯಶಸ್ವಿ ಜೈಸ್ವಾಲ್‌ 10 ರನ್ ಗಳಿಸಿ ನಿರಾಸೆ ಮೂಡಿಸಿದರು.

ಚೆನ್ನೈ ಪರ ರವೀಂದ್ರ ಜಡೇಜ, ಆಕಾಶ್ ಸಿಂಗ್ ಹಾಗೂ ತುಷಾರ್ ದೇಶಪಾಂಡೆ ತಲಾ ಎರಡು ವಿಕೆಟ್ ಪಡೆದರೆ, ಮೊಯಿನ್ ಅಲಿ ಒಂದು ವಿಕೆಟ್ ಕಬಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT