ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲಿಂಗ್ನ (ಐಪಿಎಲ್) 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಡೇವಿಡ್ ವಾರ್ನರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಆರ್ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ಇನ್ನೂ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ನಾಲ್ಕು ಪಂದ್ಯಗಳನ್ನು ಆಡಿರುವ ಡೆಲ್ಲಿ ನಾಲ್ಕರಲ್ಲೂ ಸೋಲು ಕಂಡಿದೆ.

ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಟೂರ್ನಿಯಲ್ಲಿ ಭರ್ಜರಿ ಆರಂಭ ಪಡೆದಿದ್ದ ಫಫ್ ಡುಪ್ಲೆಸಿ ಬಳಗ, ಬಳಿಕದ ಎರಡೂ ಪಂದ್ಯಗಳನ್ನು ಸೋತಿದೆ. ಅದರಲ್ಲೂ ಐದು ದಿನಗಳ ಹಿಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಎದುರು ಅಂತಿಮ ಎಸೆತದಲ್ಲಿ ಮಣಿದಿತ್ತು.

ಮೊದಲು ಬ್ಯಾಟ್ ಮಾಡಿ 212 ರನ್ ಗಳಿಸಿದ್ದರೂ, ಅದನ್ನು ‘ಡಿಫೆಂಡ್’ ಮಾಡುವಲ್ಲಿ ಎಡವಿತ್ತು. ಬೌಲರ್ಗಳು ಕೊನೆಯ ಓವರ್ಗಳಲ್ಲಿ ಹೆಚ್ಚು ರನ್ ಬಿಟ್ಟುಕೊಟ್ಟದ್ದು ಸೋಲಿಗೆ ಕಾರಣವಾಗಿತ್ತು. ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗೆಲುವಿನ ಹಾದಿಗೆ ಮರಳಲು ಪ್ರಯತ್ನಿಸಲಿದೆ.

ಮೊಹಮ್ಮದ್ ಸಿರಾಜ್ ಹೊರತುಪಡಿಸಿ, ಇತರ ಬೌಲರ್ಗಳು ಇನ್ನೂ ಪರಿಣಾಮಕಾರಿ ಎನಿಸಿಲ್ಲ. ಶ್ರೀಲಂಕಾದ ಲೆಗ್ಸ್ಪಿನ್ ಆಲ್ರೌಂಡರ್ ವನಿಂದು ಹಸರಂಗ ಅವರು ಆಯ್ಕೆಗೆ ಲಭ್ಯರಿರುವುದು ಬೌಲಿಂಗ್ ವಿಭಾಗಕ್ಕೆ ಬಲ ತುಂಬಿದೆ. ವೇಯ್ನ್ ಪಾರ್ನೆಲ್ ಅಥವಾ ಡೇವಿಡ್ ವಿಲಿ ಅವರಲ್ಲೊಬ್ಬರು ಅಂತಿಮ ಇಲೆವೆನ್ನಲ್ಲಿ ಹಸರಂಗ ಅವರಿಗೆ ದಾರಿಮಾಡಿಕೊಡಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.