ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL-2023 ಎಲಿಮಿನೇಟರ್‌ ಪಂದ್ಯ: ಲಖನೌ ವಿರುದ್ಧ ಟಾಸ್‌ ಗೆದ್ದ ಮುಂಬೈ ಬ್ಯಾಟಿಂಗ್‌ ಆಯ್ಕೆ

Published 24 ಮೇ 2023, 14:04 IST
Last Updated 24 ಮೇ 2023, 14:04 IST
ಅಕ್ಷರ ಗಾತ್ರ

ಚೆನ್ನೈ: ಐಪಿಎಲ್‌ ಟೂರ್ನಿಯ ಪ್ಲೇ ಆಫ್‌ಗೆ ‘ನಾಟಕೀಯ’ ರೀತಿಯಲ್ಲಿ ಪ್ರವೇಶ ಪಡೆದಿರುವ ಮುಂಬೈ ಇಂಡಿಯನ್ಸ್‌ ತಂಡ ‘ಎಲಿಮಿನೇಟರ್‌’ ಪಂದ್ಯದಲ್ಲಿ ಲಖನೌ ಸೂಪರ್‌ ಜೈಂಟ್ಸ್‌ ವಿರುದ್ಧ ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಕಳೆದ ಟೂರ್ನಿಯಲ್ಲಿ ಕೊನೆಯ ಸ್ಥಾನ ಪಡೆದು ಮುಖಭಂಗ ಅನುಭವಿಸಿದ್ದ ರೋಹಿತ್‌ ಶರ್ಮಾ ಬಳಗ, ಈ ಬಾರಿ ಅಲ್ಪ ಅದೃಷ್ಟದ ನೆರವಿನೊಂದಿಗೆ ಲೀಗ್‌ ಹಂತವನ್ನು ದಾಟಿದೆ.

ಭಾನುವಾರ ನಡೆದಿದ್ದ ಕೊನೆಯ ಲೀಗ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ತಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಮಣಿಸಿದ್ದರಿಂದ ಮುಂಬೈ ‘ಪ್ಲೇ ಆಫ್‌’ನಲ್ಲಿ ಸ್ಥಾನ ಪಡೆದಿತ್ತು.

ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದ್ದು, ಗೆಲುವು ಸಾಧಿಸುವ ತಂಡ ಮೇ 26 ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ‘ಕ್ವಾಲಿಫೈಯರ್‌–2’ ಪಂದ್ಯದಲ್ಲಿ ಆಡಲಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT