ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2023: ಲಖನೌ ವಿರುದ್ಧ ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌ ಬೌಲಿಂಗ್ ಆಯ್ಕೆ

Last Updated 1 ಏಪ್ರಿಲ್ 2023, 14:11 IST
ಅಕ್ಷರ ಗಾತ್ರ

ಲಖನೌ: ಇಂಡಿಯನ್‌ ಪ್ರೀಮಿಯರ್ ಲೀಗ್‌ನ (ಐಪಿಎಲ್‌) 16ನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ಲಖನೌ ಸೂಪರ್‌ ಜೈಂಟ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.

ಲಖನೌ ಸೂಪರ್‌ ಜೈಂಟ್ಸ್‌ ವಿರುದ್ಧ ಟಾಸ್‌ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಲಖನೌದ ಇಕಾನಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಲಖನೌ ತಂಡ ನಾಯಕ ಕೆ.ಎಲ್‌.ರಾಹುಲ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕ ಡೇವಿಡ್ ವಾರ್ನರ್‌ ಶುಭಾರಂಭದ ನಿರೀಕ್ಷೆಯಲ್ಲಿದ್ದಾರೆ.

ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ ಅವರು ಈ ಪಂದ್ಯಕ್ಕೆ ಲಭ್ಯರಿಲ್ಲ. ಆದ್ದರಿಂದ ನಾಯಕ ರಾಹುಲ್‌ ಅವರು ನಿಕೋಲಸ್ ಪೂರನ್, ಆಲ್‌ರೌಂಡರ್‌ಗಳಾದ ದೀಪಕ್ ಹೂಡಾ, ಕೃಣಾಲ್ ಪಾಂಡ್ಯ, ಕನ್ನಡಿಗ ಕೆ.ಗೌತಮ್, ಕೈಲ್ ಮೇಯರ್ಸ್ ಅವರಂತಹ ಆಟಗಾರರನ್ನು ನೆಚ್ಚಿಕೊಂಡು ಗೆಲುವಿಗೆ ತಂತ್ರ ರೂಪಿಸಬೇಕಿದೆ. ಡಿ ಕಾಕ್‌ ಅನುಪಸ್ಥಿತಿಯಲ್ಲಿ ಮೇಯರ್ಸ್‌ ಅವರ ಜವಾಬ್ದಾರಿ ಹೆಚ್ಚಿದೆ.

ವಾರ್ನರ್‌– ಮಾರ್ಷ್‌ ಮೇಲೆ ಚಿತ್ತ: ಮತ್ತೊಂದೆಡೆ ಡೆಲ್ಲಿ ತಂಡ ಆಸ್ಟ್ರೇಲಿಯಾದ ಇಬ್ಬರು ಆಟಗಾರರಾದ ವಾರ್ನರ್‌ ಮತ್ತು ಆಲ್‌ರೌಂಡರ್‌ ಮಿಚೆಲ್‌ ಮಾರ್ಷ್‌ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದೆ. ಮಾರ್ಷ್‌ ಅತ್ಯುತ್ತಮ ಫಾರ್ಮ್‌ನಲ್ಲಿರುವುದು ತಂಡದ ಬಲ ಹೆಚ್ಚಿಸಿದೆ.

ಪೃಥ್ವಿ ಶಾ, ರೊವ್ಮನ್‌ ಪೊವೆಲ್‌ ಮತ್ತು ಸರ್ಫರಾಜ್‌ ಖಾನ್‌ ಅವರೂ ಅಬ್ಬರದ ಆಟವಾಡುವ ತಾಕತ್ತು ಹೊಂದಿದ್ದಾರೆ. ಬೌಲಿಂಗ್‌ನಲ್ಲಿ ಅಕ್ಷರ್‌ ಪಟೇಲ್‌ ಮತ್ತು ಕುಲದೀಪ್‌ ಯಾದವ್‌ ಪ್ರಮುಖ ಪಾತ್ರ ವಹಿಸಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಬ್ಯಾಟಿಂಗ್‌ನಲ್ಲೂ ಮಿಂಚಿದ್ದ ಅಕ್ಷರ್‌, ಅದೇ ಫಾರ್ಮ್‌ಅನ್ನು ಇಲ್ಲೂ ಮುಂದುವರಿಸುವ ವಿಶ್ವಾಸದಲ್ಲಿದ್ದಾರೆ.

ಇಶಾಂತ್‌ ಶರ್ಮ ಫಾರ್ಮ್‌ ಕಳೆದುಕೊಂಡಿರುವುದು ಮತ್ತು ಪ್ರಮುಖ ವೇಗದ ಬೌಲರ್‌ಗಳು ಇಲ್ಲದಿರುವುದು ಡೆಲ್ಲಿ ತಂಡಕ್ಕೆ ಅಲ್ಪ ಹಿನ್ನಡೆ ಉಂಟುಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT