ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024: ಮುಂಬೈಗೆ 169 ರನ್‌ಗಳ ಗೆಲುವಿನ ಗುರಿ ನೀಡಿದ ಟೈಟನ್ಸ್

Published 24 ಮಾರ್ಚ್ 2024, 13:36 IST
Last Updated 24 ಮಾರ್ಚ್ 2024, 13:36 IST
ಅಕ್ಷರ ಗಾತ್ರ

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್‌ ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ತಂಡ ಮುಂಬೈ ಇಂಡಿಯನ್ಸ್‌ಗೆ ಗೆಲ್ಲಲು 169 ರನ್‌ಗಳ ಗುರಿ ನೀಡಿದೆ.

ಇಲ್ಲಿನ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಮುಂಬೈ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು.

ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 168 ರನ್‌ಗಳಿಸಿತು. ಸಾಯಿ ಸುದರ್ಶನ್‌ 45, ಗಿಲ್‌ 31 ರನ್‌ ಹೊಡೆದು ಗಮನ ಸೆಳೆದರು. ಮುಂಬೈ ಪರ ಬೂಮ್ರಾ ಉತ್ತಮ ಬೌಲಿಂಗ್‌ ದಾಳಿ ನಡೆಸಿ 3 ವಿಕೆಟ್‌ ಪಡೆದರು.

ಮುಂಬೈ ಇಂಡಿಯನ್ಸ್ ಈ ಪಂದ್ಯವನ್ನು ಗೆಲ್ಲಬೇಕಾದರೆ 169 ರನ್‌ ಮಾಡಬೇಕಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT