ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

MI vs RR: ಮುಂಬೈ ವಿರುದ್ಧ ಬೌಲ್ಟ್ ಕಮಾಲ್‌, ರಾಯಲ್ಸ್‌ ಗೆಲುವಿಗೆ 126 ರನ್ ಗುರಿ

Published 1 ಏಪ್ರಿಲ್ 2024, 13:57 IST
Last Updated 1 ಏಪ್ರಿಲ್ 2024, 13:57 IST
ಅಕ್ಷರ ಗಾತ್ರ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಟೂರ್ನಿಯ 14ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸಾಧಾರಣ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಯಶಸ್ವಿಯಾಗಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿತು.

ಮುಂಬೈ ತಂಡದ ಆರಂಭಿಕ ಆಟಗಾರರು ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್ ದಾಳಿಗೆ ತತ್ತರಿಸಿದರು. ರನ್ ಖಾತೆ ತೆರೆಯುವ ಮುನ್ನವೇ ರೋಹಿತ್ ಶರ್ಮಾ, ನಮನ್ ಧೀರ್, ಡೆವಾಲ್ಡ್‌ ಬ್ರೆವಿಸ್ ಪೆವಿಲಿಯನ್ ಸೇರಿದರು.

ನಾಯಕ ಹಾರ್ದಿಕ್ ಪಾಂಡ್ಯ 21 ಎಸೆತಗಳಲ್ಲಿ 6 ಬೌಂಡರಿ ಸಹಿತ 34 ರನ್ ಗಳಿಸಿದರು. ತಿಲಕ್ ವರ್ಮಾ 32, ಟಿಮ್ ಡೇವಿಡ್ 17, ಇಶಾನ್ ಕಿಶನ್ 16 ರನ್ ಗಳಿಸಿ ತಂಡಕ್ಕೆ ಆಸರೆಯಾದರು.

ರಾಜಸ್ಥಾನ ರಾಯಲ್ಸ್ ಪರ ಟ್ರೆಂಟ್ ಬೌಲ್ಟ್ ಹಾಗೂ ಯಜುವೇಂದ್ರ ಚಾಹಲ್ ತಲಾ ಮೂರು ವಿಕೆಟ್ ಪಡೆದರೆ, ನಾಂದ್ರೆ ಬರ್ಗರ್ 2, ಆವೇಶ್ ಖಾನ್ ಒಂದು ವಿಕೆಟ್ ಕಬಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT