ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ಯಾಲರಿಯಲ್ಲಿ 'ಯೂನಿವರ್ಸ್ ಬಾಸ್'; RCB ಜಯ 'ನಂಬಲು ಅಸಾಧ್ಯ' ಎಂದ ಫ್ಯಾನ್ಸ್

Published 19 ಮೇ 2024, 3:28 IST
Last Updated 19 ಮೇ 2024, 3:28 IST
ಅಕ್ಷರ ಗಾತ್ರ

ಬೆಂಗಳೂರು: ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರೋಚಕ ಗೆಲುವು ದಾಖಲಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ-ಆಫ್‌ಗೆ ಪ್ರವೇಶಿಸಿದೆ.

ಆರ್‌ಸಿಬಿ ಗೆಲುವನ್ನು ಯೂನಿವರ್ಸ್ ಬಾಸ್ ಖ್ಯಾತಿಯ ವೆಸ್ಟ್‌ಇಂಡೀಸ್‌ನ ಕ್ರಿಸ್ ಗೇಲ್ ಕಣ್ಣಾರೆ ಕಂಡರು. ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಮಾನಿಗಳು ಆರ್‌ಸಿಬಿ ಗೆಲುವನ್ನು ಸಂಭ್ರಮಿಸಿಕೊಳ್ಳುತ್ತಿದ್ದಾರೆ. ತಡರಾತ್ರಿವರೆಗೂ ಬೆಂಗಳೂರಿನಲ್ಲಿ ಹಬ್ಬಕ್ಕೆ ಸಮಾನವಾದ ವಾತಾವರಣ ಮನೆ ಮಾಡಿತ್ತು.

ಎಬಿಡಿ ವಿಲಿಯರ್ಸ್ ಸೇರಿದಂತೆ ಕ್ರಿಕೆಟ್ ಲೋಕದ ಪ್ರಮುಖರು ಆರ್‌ಸಿಬಿ ಗೆಲುವನ್ನು ಗುಣಗಾನ ಮಾಡಿದ್ದಾರೆ. ವಿಲಿಯರ್ಸ್ ತಮ್ಮ ಸಂದೇಶದಲ್ಲಿ ಆರ್‌ಸಿಬಿ ತಂಡವನ್ನು ಯಾವತ್ತೂ ಕಡೆಗಣಿಸಬೇಡಿ. ಎಂತಹ ಅದ್ಭುತ ಪ್ರದರ್ಶನ, ಕಪ್ ಗೆದ್ದು ಬನ್ನಿ ಎಂದು ಶುಭ ಹಾರೈಸಿದ್ದಾರೆ.

ವಿಜಯ್ ಮಲ್ಯ ಸಹ ಅಭಿನಂದನೆಗಳನ್ನು ಸಲ್ಲಿಸಿದ್ದು, ಟ್ರೋಫಿಯ ಕಡೆಗೆ ಹೆಜ್ಜೆ ಎಂದು ಹೇಳಿದ್ದಾರೆ.

ಮೊದಲ ಎಂಟು ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಮಾತ್ರ ಆರ್‌ಸಿಬಿ ಜಯ ಗಳಿಸಿತ್ತು. ಅಲ್ಲದೆ ಸತತ ಆರು ಪಂದ್ಯಗಳಲ್ಲಿ ಸೋಲಿಗೆ ಶರಣಾಗಿತ್ತು. ಆದರೆ ಕೊನೆಯ ಎಲ್ಲ ಆರು ಪಂದ್ಯಗಳಲ್ಲಿ ಗೆದ್ದು ಆರ್‌ಸಿಬಿ ಅಂತಿಮ ನಾಲ್ಕರ ಘಟ್ಟಕ್ಕೆ ಪ್ರವೇಶಿಸಿದೆ. ಅಭಿಮಾನಿಗಳು ಅಂತೂ ಈ ಸಾಧನೆಯನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಅದರಲ್ಲೂ ಚೆನ್ನೈ ವಿರುದ್ಧದ ಜಯ, ಸಂಭ್ರಮವನ್ನು ಇಮ್ಮಡಿಗೊಳಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT