ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

IPL 2024 | ಎಲಿಮಿನೇಟರ್ ಪಂದ್ಯ: ಆರ್‌ಸಿಬಿಗೆ–ರಾಜಸ್ಥಾನ ಸವಾಲು

Published 19 ಮೇ 2024, 18:17 IST
Last Updated 19 ಮೇ 2024, 18:17 IST
ಅಕ್ಷರ ಗಾತ್ರ

ಗುವಾಹಟಿ: ಭಾನುವಾರ ರಾತ್ರಿ ಇಲ್ಲಿ ನಡೆಯಬೇಕಿದ್ದ ರಾಜಸ್ಥಾನ ರಾಯಲ್ಸ್ ಮತ್ತು ಕೋಲ್ಕತ್ತ ನೈಟ್‌ ರೈಡರ್ಸ್ ಪಂದ್ಯವು ಮಳೆಯಿಂದಾಗಿ ರದ್ದಾಯಿತು. ಇದರೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಪಡೆಯುವ ರಾಜಸ್ಥಾನದ ಗುರಿ ಈಡೇರಲಿಲ್ಲ. ಟೂರ್ನಿಯ ಕೊನೆಯ ಲೀಗ್ ಪಂದ್ಯ ಇದಾಗಿತ್ತು. 

ಇದೇ 22ರಂದು ಅಹಮದಾಬಾದಿನಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಾಜಸ್ಥಾನ ರಾಯಲ್ಸ್‌ ಎದುರಿಸಲಿದೆ. ಆರ್‌ಸಿಬಿ ಅಂಕಪಟ್ಟಿಯ ನಾಲ್ಕನೇ ಸ್ಥಾನದಲ್ಲಿದೆ. 

ಅಗ್ರಸ್ಥಾನದಲ್ಲಿರುವ ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಎರಡನೇ ಸ್ಥಾನದಲ್ಲಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು 21ರಂದು ನಡೆಯುವ ಮೊದಲ ಕ್ವಾಲಿಫೈಯರ್‌ನಲ್ಲಿ ಮುಖಾಮುಖಿಯಾಗಲಿವೆ.   ಈ ಪಂದ್ಯದಲ್ಲಿ ಸೋತ ತಂಡ ಹಾಗೂ ಎಲಿಮಿನೇಟರ್‌ನಲ್ಲಿ ಜಯಿಸಿದ ತಂಡವು 24ರಂದು ಚೆನ್ನೈನಲ್ಲಿ ನಡೆಯುವ ಎರಡನೇ ಕ್ವಾಲಿಫೈಯರ್‌ನಲ್ಲಿ ಹಣಾಹಣಿ ನಡೆಸಲಿವೆ. 26ರಂದು ಫೈನಲ್ ನಡೆಯಲಿದೆ. 

ರಾಜಸ್ಥಾನ ತಂಡಕ್ಕೆ ಎರಡನೇ ಸ್ಥಾನ ಪಡೆಯಲು ಈ ಪಂದ್ಯದ ಗೆಲುವು ಮುಖ್ಯವಾಗಿತ್ತು. ಆದರೆ ಸಂಜೆಯಿಂದಲೇ ಮಳೆ ಸುರಿಯಲು ಆರಂಭವಾಯಿತು.  ಗುವಾಹಟಿಯು ರಾಜಸ್ಥಾನ ತಂಡಕ್ಕೆ ಎರಡನೇ ತವರು ತಾಣವಾಗಿದೆ.

ಬರ್ಸಾಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೇರಿದ್ದ ಪ್ರೇಕ್ಷಕರು ನಿರಾಶೆಗೊಂಡರು. ಸ್ಥಳೀಯ ಹುಡುಗ ರಿಯಾನ್ ಪರಾಗ್ ಅವರ ಆಟ ನೋಡುವ ಅವರ ನಿರೀಕ್ಷೆಯೂ ಈಡೇರಲಿಲ್ಲ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT