ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024 | ರಿಷಭ್ ಪಂತ್‌ಗೆ ಒಂದು ಪಂದ್ಯದ ಅಮಾನತು

Published 11 ಮೇ 2024, 23:50 IST
Last Updated 11 ಮೇ 2024, 23:50 IST
ಅಕ್ಷರ ಗಾತ್ರ

ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಅವರ ಮೇಲೆ ಒಂದು ಪಂದ್ಯದ ಅಮಾನತು ವಿಧಿಸಿರುವುದರಿಂದ ಅವರು ಆರ್‌ಸಿಬಿ ಎದುರು ಕಣಕ್ಕಿಳಿಯುವುದಿಲ್ಲ. 

ಪ್ರಸಕ್ತ ಟೂರ್ನಿಯಲ್ಲಿ ಮೂರು ಪಂದ್ಯಗಳಲ್ಲಿ ನಿಗದಿಯ ಸಮಯದಲ್ಲಿ ಓವರ್‌ಗಳನ್ನು ಪೂರ್ಣಗೊಳಿಸದ ಕಾರಣಕ್ಕೆ ಅವರನ್ನು ಅಮಾನತು ಮಾಡಲಾಗಿದೆ. ಅಲ್ಲದೇ ₹ 30 ಲಕ್ಷ ದಂಡ ವಿಧಿಸಲಾಗಿದೆ. 

ಕಳೆದ ಪಂದ್ಯದಲ್ಲಿ ಡೆಲ್ಲಿ ತಂಡವು 20 ಓವರ್‌ಗಳನ್ನು ಪೂರ್ಣಗೊಳಿಸಲು 117.82 ನಿಮಿಷಗಳನ್ನು ತೆಗೆದುಕೊಂಡಿತ್ತು.  ಇದು ನಿಗದಿಯ 85 ನಿಮಿಷಗಳನ್ನು ಮೀರಿತ್ತು.  

ತಂಡವು ಚೆನ್ನೈ ಸೂಪರ್ ಕಿಂಗ್ಸ್ (ಮಾ.31), ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ ರಾಯಲ್ಸ್ (ಮೇ 7) ಪಂದ್ಯಗಳಲ್ಲಿ ಸಮಯ ನಿಯಮವನ್ನು ಉಲ್ಲಂಘಿಸಿತ್ತು ಐಪಿಎಲ್ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT