ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024: ಇನ್ನು ಮುಂದೆ ರಾಯಲ್ ಚಾಲೆಂಜರ್ಸ್ ಬ್ಯಾಂಗಲೋರ್‌ ಅಲ್ಲ 'ಬೆಂಗಳೂರು'

Published 19 ಮಾರ್ಚ್ 2024, 16:05 IST
Last Updated 19 ಮಾರ್ಚ್ 2024, 16:05 IST
ಅಕ್ಷರ ಗಾತ್ರ

ಬೆಂಗಳೂರು: ಇದೀಗ ಎಲ್ಲವೂ ಅಂತಿಮಗೊಂಡಿದ್ದು, ರಾಯಲ್ ಚಾಲೆಂಜರ್ಸ್ ಬ್ಯಾಂಗಲೋರ್‌ (Bangalore) ತಂಡದ ಹೆಸರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (Bengaluru) ಎಂದು ಅಧಿಕೃತವಾಗಿ ಬದಲಾಯಿಸಲಾಗಿದೆ.

ಈ ಕುರಿತು ಇಂದು ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮದಲ್ಲಿ ಪ್ರಕಟಿಸಲಾಗಿದೆ.

ಆರ್‌ಸಿಬಿ ಅಧಿಕೃತ ಖಾತೆಯಲ್ಲೂ ಮಾಹಿತಿ ಹಂಚಿಕೊಳ್ಳಲಾಗಿದೆ. 'ಹೊಸ ಅಧ್ಯಾಯಕ್ಕೆ ಸಮಯವಾಗಿದೆ, ನಿಮ್ಮ ತಂಡ, ನಿಮ್ಮ ಆರ್‌ಸಿಬಿ' ಎಂದು ಉಲ್ಲೇಖಿಸಿದೆ.

ಈ ಮೊದಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಚೊಚ್ಚಲ ಟ್ರೋಫಿ ಗೆದ್ದ ಸ್ಮೃತಿ ಮಂದಾನ ಬಳಗದ ವಿಜಯೋತ್ಸವ ಕಾರ್ಯಕ್ರಮ ನೆರವೇರಿತು.

ಐಪಿಎಲ್ 2024 ಟೂರ್ನಿ ಶುಕ್ರವಾರ ಆರಂಭವಾಗಲಿದೆ. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಹಾಗೂ ಆರ್‌ಸಿಬಿ ಆಟಗಾರರು ನೂತನ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT