ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024: RR vs GT- ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಬೌಲಿಂಗ್ ಆಯ್ಕೆ

IPL Match Updates
Published 10 ಏಪ್ರಿಲ್ 2024, 14:15 IST
Last Updated 10 ಏಪ್ರಿಲ್ 2024, 14:15 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಸಕ್ತ ಸಾಲಿನ ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಣದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಗಿವೆ.

ಟಾಸ್ ಗೆದ್ದಿರುವ ಗುಜರಾತ್ ಟೈಟನ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ತಂಡವು ಈ ಸಾರಿಯ ಐಪಿಎಲ್‌ನಲ್ಲಿ ಆಡಿದ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ಇಂದು ಐದನೇ ಪಂದ್ಯದಲ್ಲೂ ತಮ್ಮ ಗೆಲುವಿನ ಓಟವನ್ನು ಮುಂದುವರೆಸಲು ಉತ್ಸುಕವಾಗಿದೆ.

ಶುಭಮನ್ ಗಿಲ್ ನಾಯಕತ್ವದ ಗುಜರಾತ್ ಟೈಟನ್ಸ್ ತಂಡ ಆಡಿದ 5 ಪಂದ್ಯಗಳಲ್ಲಿ ಎರಡು ಗೆಲುವು ಮತ್ತು ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಈ ದಿನದ ಪಂದ್ಯದಲ್ಲಿ ಗಿಲ್ ನಾಯಕತ್ವಕ್ಕೆ ಗೆಲುವು ಅನಿವಾರ್ಯವಾಗಿದೆ.

ಇತ್ತಂಡಗಳಲ್ಲಿ ಅಂತಹ ಪ್ರಮುಖ ಬದಲಾವಣೆಗಳೂ ಏನೂ ಆಗಿಲ್ಲ. ಇತ್ತೀಚಿನ ಮಾಹಿತಿ ಪ್ರಕಾರ ಆರ್‌ಆರ್‌ ಒಂದು ಓವರ್‌ಗೆ ವಿಕೆಟ್ ನಷ್ಟವಿಲ್ಲದೇ ಆರು ರನ್ ಗಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT