ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024: ‘ಕಿಂಗ್’ ಕೊಹ್ಲಿ ಶತಕದ ಅರ್ಭಟ, ರಾಯಲ್ಸ್‌ ಗೆಲುವಿಗೆ 184 ರನ್ ಗುರಿ

Published 6 ಏಪ್ರಿಲ್ 2024, 13:55 IST
Last Updated 6 ಏಪ್ರಿಲ್ 2024, 13:55 IST
ಅಕ್ಷರ ಗಾತ್ರ

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಟೂರ್ನಿಯ 19ನೇ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಅವರು ಶತಕದ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ ರಾಯಲ್ಸ್ ಎದುರು ಬೃಹತ್ ಮೊತ್ತ ಪೇರಿಸಿದೆ.

ಜೈಪುರದ ಸವಾಯಿ ಮಾನ್‌ಸಿಂಗ್ ಕ್ರಿಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 183 ರನ್ ಗಳಿಸಿದೆ.

ಆರಂಭಿಕ ಆಟಗಾರರಾದ ವಿರಾಟ್‌ ಕೊಹ್ಲಿ ಔಟಾಗದೆ 72 ಎಸೆತಗಳಲ್ಲಿ 12 ಬೌಂಡರಿ, 4 ಸಿಕ್ಸರ್ ಸಹಿತ 113 ರನ್‌ ಗಳಿಸಿ ಮಿಂಚಿದರು. ಕೊಹ್ಲಿಗೆ ಸಾಥ್ ನೀಡಿದ ನಾಯಕ ಫಫ್ ಡುಪ್ಲೆಸಿ 33 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ ಸಹಿತ 44 ರನ್ ಗಳಿಸಿ ಚಾಹಲ್‌ಗೆ ವಿಕೆಟ್‌ ಒಪ್ಪಿಸಿದರು.

ಬಳಿಕ ಕ್ರೀಸ್‌ಗೆ ಬಂದ ಗ್ಲೆನ್ ಮ್ಯಾಕ್ಸ್‌ವೆಲ್ ಕೇವಲ 1 ರನ್ ಗಳಿಸಿ ನಿರಾಸೆ ಮೂಡಿಸಿದರು. ಇತ್ತ ಸೌರವ್ ಚೌಹಾಣ್ 6 ರನ್ ಗಳಿಸಿದರೆ, ಮರೂನ್ ಗ್ರೀನ್ ಔಟಾಗದೆ 5 ರನ್ ಗಳಿಸಿದರು.

ರಾಜಸ್ಥಾನದ ಪರ ಯಜುವೇಂದ್ರ ಚಾಹಲ್ 2, ನಾಂದ್ರೆ ಬರ್ಗರ್ 1 ವಿಕೆಟ್‌ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT