ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024 Schedule: ಆರ್‌ಸಿಬಿ ತಂಡದ ಮೊದಲ ಐದು ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Published 22 ಫೆಬ್ರುವರಿ 2024, 13:07 IST
Last Updated 22 ಫೆಬ್ರುವರಿ 2024, 13:07 IST
ಅಕ್ಷರ ಗಾತ್ರ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಮೊದಲ 17 ದಿನಗಳ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆಗೊಳಿಸಿದೆ.

ಮಾರ್ಚ್ 22ರಂದು ಚೆನ್ನೈಯಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸವಾಲನ್ನು ಎದುರಿಸಲಿದೆ.

ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮೊದಲ ಹಂತದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಅವಧಿಯಲ್ಲಿ 10 ನಗರಗಳಲ್ಲಾಗಿ ಒಟ್ಟು 21 ಪಂದ್ಯಗಳು ನಡೆಯಲಿದೆ. ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.

ಮಾರ್ಚ್ 25ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಳಾಪಟ್ಟಿ ಇಲ್ಲಿದೆ (ಮೊದಲ 5 ಪಂದ್ಯ):

  • ಮಾರ್ಚ್ 22: ಆರ್‌ಸಿಬಿ vs ಚೆನ್ನೈ (ತಾಣ: ಚೆನ್ನೈ)

  • ಮಾರ್ಚ್ 25: ಆರ್‌ಸಿಬಿ vs ಪಂಜಾಬ್ (ತಾಣ: ಬೆಂಗಳೂರು)

  • ಮಾರ್ಚ್ 29: ಆರ್‌ಸಿಬಿ vs ಕೋಲ್ಕತ್ತ (ತಾಣ: ಬೆಂಗಳೂರು)

  • ಏಪ್ರಿಲ್ 02: ಆರ್‌ಸಿಬಿ vs ಲಖನೌ (ತಾಣ: ಬೆಂಗಳೂರು)

  • ಏಪ್ರಿಲ್ 06: ಆರ್‌ಸಿಬಿ vs ರಾಜಸ್ಥಾನ (ತಾಣ: ಜೈಪುರ)

ಐಪಿಎಲ್ 2024: ಮೊದಲ 21 ಪಂದ್ಯಗಳ ವೇಳಾಪಟ್ಟಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT