ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024: ತರಬೇತಿ ಶಿಬಿರ ಸೇರಿಕೊಂಡ ವಿರಾಟ್ ಕೊಹ್ಲಿ

Published 18 ಮಾರ್ಚ್ 2024, 16:34 IST
Last Updated 18 ಮಾರ್ಚ್ 2024, 16:34 IST
ಅಕ್ಷರ ಗಾತ್ರ

ಬೆಂಗಳೂರು: ಭಾರತದ ಬ್ಯಾಟಿಂಗ್ ತಾರೆ ವಿರಾಟ್ ಕೊಹ್ಲಿ ಅವರು ಸೋಮವಾರ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ತರಬೇತಿ ಶಿಬಿರದಲ್ಲಿ ಮೊದಲ ಬಾರಿ ಕಾಣಿಸಿಕೊಂಡರು. ಇದೇ 22ರಂದು ಇಂಡಿಯನ್‌ ಪ್ರೀಮಿಯರ್ ಲೀಗ್ ಆರಂಭವಾಗಲಿದೆ.

ಕೊಹ್ಲಿ ಲಂಡನ್‌ನಿಂದ ಭಾನುವಾರ ಸ್ವದೇಶಕ್ಕೆ ಮರಳಿದ್ದರು. ಎರಡನೇ ಮಗು ಅಕಾಯ್ ಜನನದ ಕಾರಣ ಅವರು ಲಂಡನ್‌ನಲ್ಲಿದ್ದರು.

ಸೋಮವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊಹ್ಲಿ ವಾರ್ಮ್‌ ಅಪ್ ನಡೆಸಿದರು. ಆರ್‌ಸಿಬಿ ಚೆನ್ನೈನಲ್ಲಿ ಶುಕ್ರವಾರ ನಡೆಯುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಎದುರಿಸಲಿದೆ.

ಆರ್‌ಸಿಬಿ ಪರ ಈ ಹಿಂದಿನ ಆವೃತ್ತಿಯಲ್ಲಿ ಅವರು ಎರಡು ಶತಕ, ಆರು ಅರ್ಧ ಶತಕಗಳ ನೆರವಿನಿಂದ ಪರ 639 ರನ್ ಕಲೆಹಾಕಿದ್ದರು.

35 ವರ್ಷದ ಕೊಹ್ಲಿ ಅವರಿಗೆ ಐಪಿಎಲ್‌ನ ಪ್ರದರ್ಶನ ಮಹತ್ವದ್ದಾಗಲಿದೆ. ಈ ಟೂರ್ನಿಯ ನಂತರ ಅಮೆರಿಕ ಮತ್ತು ಕೆರಿಬಿಯನ್‌ನಲ್ಲಿ ಐಸಿಸಿ  ಟಿ20 ವಿಶ್ವಕಪ್‌ ಪಂದ್ಯಾವಳಿ ಇರುವ ಕಾರಣ ಐಪಿಎಲ್‌ನಲ್ಲಿ ಅವರ ಪ್ರದರ್ಶನದ ಮೇಲೆ ಎಲ್ಲರ ಗಮನ ನೆಟ್ಟಿದೆ. ಕೊಹ್ಲಿ, ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್‌ಗಳ ಸರಣಿಯಲ್ಲಿ ಆಡಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT