ನವದೆಹಲಿ: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣ ನಾಯಕ ಅಕ್ಷರ್ ಪಟೇಲ್ಗೆ ₹ 12 ಲಕ್ಷ ದಂಡ ವಿಧಿಸಲಾಗಿದೆ.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಆತಿಥೇಯ ಡೆಲ್ಲಿ ಪಡೆ, 12 ರನ್ ಅಂತರದ ಸೋಲು ಅನುಭವಿಸಿತು.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮುಂಬೈ, ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ಗೆ 205 ರನ್ ಕಲೆಹಾಕಿತ್ತು. ಗುರಿ ಬೆನ್ನತ್ತಿದ ಡೆಲ್ಲಿ, 19 ಓವರ್ಗಳಲ್ಲಿ 193 ರನ್ ಗಳಿಸಿ ಸರ್ವಪತನ ಕಂಡಿತು.

ಟೂರ್ನಿಯಲ್ಲಿ ಐದು ಪಂದ್ಯ ಆಡಿರುವ ಡೆಲ್ಲಿಗೆ ಎದುರಾದ ಮೊದಲ ಸೋಲು ಇದು. ಇದರೊಂದಿಗೆ, ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಾರುವಂತಾಯಿತು.

'ಟಾಟಾ ಐಪಿಎಲ್–2025ರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕಾಗಿ, ನಾಯಕ ಅಕ್ಷರ್ ಪಟೇಲ್ಗೆ ದಂಡ ವಿಧಿಸಲಾಗಿದೆ. ಡೆಲ್ಲಿ ತಂಡ ಈ ಟೂರ್ನಿಯಲ್ಲಿ ನಿಧಾನಗತಿ ಬೌಲಿಂಗ್ ಮಾಡಿದ್ದು ಇದೇ ಮೊದಲು. ಐಪಿಎಲ್ ನೀತಿ ಸಂಹಿತೆಯ ನಿಯಮ 2.22 ಅನ್ನು ಉಲ್ಲಂಘಿಸಿದ್ದಕ್ಕಾಗಿ ಅಕ್ಷರ್ಗೆ ₹ 12 ಲಕ್ಷ ದಂಡ ವಿಧಿಸಲಾಗಿದೆ' ಎಂದು ಬಿಸಿಸಿಐ ಹೇಳಿಕೆ ಬಿಡುಗಡೆ ಮಾಡಿದೆ.
.ಮುಂಬೈಗೆ ಮಣಿದ ಕ್ಯಾಪಿಟಲ್ಸ್: ಕನ್ನಡಿಗ ಕರುಣ್ ನಾಯರ್ ಆಟಕ್ಕೆ ದಕ್ಕದ ಗೆಲುವು.IPL 2025 | ನೂರನೇ ಅರ್ಧಶತಕ ಬಾರಿಸಿದ ಕೊಹ್ಲಿ; ಟಿ20 ಕ್ರಿಕೆಟ್ನಲ್ಲಿ ದಾಖಲೆ.IPL 2025: ಓಡಿ ಆಯಾಸಗೊಂಡ ಕೊಹ್ಲಿಯ ಎದೆಬಡಿತ ಪರಿಶೀಲಿಸಿದ ಸಂಜು ಸ್ಯಾಮ್ಸನ್.IPL 2025 | RCB ಪರ 1,000 ರನ್: ಈ ಸಾಧನೆ ಮಾಡಿದ 2ನೇ ಭಾರತೀಯ ಬ್ಯಾಟರ್ ಪಡಿಕ್ಕಲ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.