ಅಹಮದಾಬಾದ್: ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣ, ನಾಯಕ ಹಾರ್ದಿಕ್ ಪಾಂಡ್ಯಗೆ ಐಪಿಎಲ್ ದಂಡ ವಿಧಿಸಿದೆ.

ಹಾರ್ದಿಕ್ಗೆ ₹ 12 ಲಕ್ಷ ದಂಡ ವಿಧಿಸಿರುವುದಾಗಿ ಐಪಿಎಲ್ ಹೇಳಿಕೆ ಬಿಡುಗಡೆ ಮಾಡಿದೆ.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ಮುಂಬೈ ತಂಡ, 36 ರನ್ಗಳ ಸೋಲು ಕಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆತಿಥೇಯ ಗುಜರಾತ್, ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ಗೆ 196 ರನ್ ಕಲೆಹಾಕಿತ್ತು. ಈ ಮೊತ್ತ ಬೆನ್ನತ್ತಿದ ಮುಂಬೈ, 6 ವಿಕೆಟ್ಗೆ 160 ರನ್ ಗಳಿಸಲಷ್ಟೇ ಶಕ್ತವಾಗಿತ್ತು.

ನಿಷೇಧಕ್ಕೊಳಗಾಗಿದ್ದ ಹಾರ್ದಿಕ್

ಮುಂಬೈ ಪಡೆ ಕಳೆದ ಆವೃತ್ತಿಯಲ್ಲಿಯೂ ಮೂರು ಪಂದ್ಯಗಳಲ್ಲಿ ನಿಧಾನಗತಿ ಬೌಲಿಂಗ್ ಮಾಡಿತ್ತು. ಆ ಕಾರಣಕ್ಕೆ ನಾಯಕ ಪಾಂಡ್ಯ ಅವರಿಗೆ ಒಂದು ಪಂದ್ಯ ನಿಷೇಧ ಹೇರಲಾಗಿತ್ತು. ಹೀಗಾಗಿ, ಅವರು ಈ ಆವೃತ್ತಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ವಿರುದ್ಧದ ಆ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ತಂಡ ಮುನ್ನಡೆಸಿದ್ದರು. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯವನ್ನು ಸಿಎಸ್ಕೆ ನಾಲ್ಕು ವಿಕೆಟ್ಗಳಿಂದ ಗೆದ್ದುಕೊಂಡಿತ್ತು.

ಸದ್ಯ ಟೂರ್ನಿಯಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿ ಸೋತಿರುವ ಮುಂಬೈ, ಪಾಯಿಂಟ್ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

ಪಾಯಿಂಟ್ ಖಾತೆ ತೆರೆಯದ ರಾಜಸ್ಥಾನ ರಾಯಲ್ಸ್ ಕೊನೇ ಸ್ಥಾನದಲ್ಲಿದೆ.

ಆಡಿರುವ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಅಗ್ರಸ್ಥಾನದಲ್ಲಿದೆ.
.IPL 2025: ಗುಜರಾತ್ ವಿರುದ್ಧ ಮುಗ್ಗರಿಸಿದ ಮುಂಬೈ, ಸತತ 2ನೇ ಸೋಲು.IPL 2025 | ರಚಿನ್, ನೂರ್ ಆಟಕ್ಕೆ ಜಯ: ಚೆನ್ನೈ ಶುಭಾರಂಭ, ಮುಂಬೈಗೆ ನಿರಾಶೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.