ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ತಂಡದ ವೇಗದ ಬೌಲರ್ ಉಮ್ರಾನ್ ಮಲಿಕ್ ಅವರು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಕ್ರಿಕೆಟ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲು ಚೇತನ್ ಸಕಾರಿಯಾ ಅವರನ್ನು ತಂಡ ಆಯ್ಕೆ ಮಾಡಿಕೊಂಡಿದೆ.

ಮಲಿಕ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಭಾರತ ತಂಡದ ಪರ ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಆಡಿರುವ ಸಕಾರಿಯಾ, ಐಪಿಎಲ್ನಲ್ಲಿ 19 ಪಂದ್ಯಗಳನ್ನು ಆಡಿದ್ದಾರೆ. 29.95ರ ಸರಾಸರಿಯಲ್ಲಿ 20 ವಿಕೆಟ್ಗಳನ್ನು ಪಡೆದಿದ್ದಾರೆ.

ಹಿಂದಿನ ಆವೃತ್ತಿಗಳಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ಸಕಾರಿಯಾ ಅವರನ್ನು ಕೋಲ್ಕತ್ತ ₹ 75 ಲಕ್ಷ ನೀಡಿ ತಂಡಕ್ಕೆ ಬರಮಾಡಿಕೊಂಡಿದೆ.

ಟೂರ್ನಿಯು ಮಾರ್ಚ್ 22ರಂದು ಆರಂಭವಾಗಲಿದೆ. ಕೋಲ್ಕತ್ತದ ಈಡನ್ ಗಾರ್ಡನ್ಸ್ನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೆಕೆಆರ್ ಸೆಣಸಾಟ ನಡೆಸಲಿವೆ.
.ಐಪಿಎಲ್ನಲ್ಲಿ ಮಿಂಚುವತ್ತ ಕರುಣ್ ಚಿತ್ತ.Steel Man of India: ಹರ್ಕ್ಯುಲಸ್ ಪಿಲ್ಲರ್ಗಳ ಎಳೆದಿಡಿದು ದಾಖಲೆ ಬರೆದ ಭಾರತೀಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.