ಇಂದು ಮುಂಬೈನಲ್ಲಿ ಮಳೆ ಸಾಧ್ಯತೆ
ಬುಧವಾರ ಮುಂಬೈ ಮಹಾನಗರಿಯಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ‘ಮಿಂಚು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ’ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲ್ಲಿ ನಡೆಯಲಿರುವ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಐಪಿಎಲ್ ಪಂದ್ಯಕ್ಕೆ ಮಳೆ ಆಡ್ಡಿಯಾಗುವ ಸಾಧ್ಯತೆ ಹೆಚ್ಚಿದೆ. ಮಂಗಳವಾರವೂ ಇಲ್ಲಿ ಮಳೆಯಾಗಿದ್ದರಿಂದ ವಾಂಖೆಡೆ ಕ್ರೀಡಾಂಗಣದಲ್ಲಿ ಉಭಯ ತಂಡಗಳ ಅಭ್ಯಾಸವನ್ನು ಮೊಟಕುಗೊಳಿಸಲಾಯಿತು.