ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ಗೆ ಎದುರಾದ ಸತತ ಎರಡನೇ ಸೋಲು ಇದು. ತವರಿನಲ್ಲಿ (ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ) ನಡೆದ ಹಿಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು 50 ರನ್ ಅಂತರದ ಸೋಲು ಕಂಡಿತ್ತು. ಮೊದಲೆರಡು ಪಂದ್ಯಗಳಲ್ಲಿ ಕ್ರಮವಾಗಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಸೋಲು ಕಂಡಿದ್ದ ರಾಜಸ್ಥಾನ, ಮೊದಲ ಜಯದ ಸವಿಯುಂಡಿತು.