ಪಂಜಾಬ್ ಇಲ್ಲವೇ ಮುಂಬೈ ಸವಾಲು
ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್‌ಸಿಬಿ ಎದುರು ಸೋತಿರುವ ಪಂಜಾಬ್ ಕಿಂಗ್ಸ್ ಹಾಗೂ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಗೆದ್ದಿರುವ ಮುಂಬೈ ಇಂಡಿಯನ್ಸ್ ನಾಳೆ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಅಹಮದಾಬಾದ್‌ನಲ್ಲಿ ನಡೆಯುವ ಈ ಪಂದ್ಯದಲ್ಲಿ ಜಯ ಸಾಧಿಸಿದ ತಂಡ, ಜೂನ್ 3ರಂದು ನಡೆಯುವ ಫೈನಲ್‌ನಲ್ಲಿ ಆರ್‌ಸಿಬಿಗೆ ಸವಾಲೊಡ್ಡಲಿದೆ.