ಮತ್ತೆ ಮೊದಲ ಪಂದ್ಯದಲ್ಲಿ ಸೋಲು
ಚೆನ್ನೈ ಎದುರಿನ ಪಂದ್ಯದಲ್ಲಿ ಮುಂಬೈ ಪಡೆ 4 ವಿಕೆಟ್ ಅಂತರದ ಸೋಲು ಅನುಭವಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಈ ತಂಡ, ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗಳನ್ನು ಕಳೆದುಕೊಂಡು 155 ರನ್ ಕಲೆಹಾಕಿತ್ತು. ಈ ಮೊತ್ತ ಬೆನ್ನತ್ತಿದ ಚೆನ್ನೈ, 19.1 ಓವರ್‌ಗಳಲ್ಲಿ 6 ವಿಕೆಟ್‌ಗೆ 158 ರನ್ ಗಳಿಸಿ ಜಯದ ನಗೆ ಬೀರಿತು. ಇದರೊಂದಿಗೆ, ಮುಂಬೈ ತಂಡ ಸತತ 13ನೇ ಆವೃತ್ತಿಯನ್ನು ಸೋಲಿನೊಂದಿಗೆ ಆರಂಭಿಸಿತು.