ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ 18ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇಂದು (ಭಾನುವಾರ) ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಅಡಚಣೆಯಾಗಿದೆ.

ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಆಟಗಾರರು ಇನ್ನೇನು ಮೈದಾನಕ್ಕೆ ಪ್ರವೇಶಿಸುತ್ತಿದ್ದಂತೆ ಮಳೆ ಸುರಿಯಲಾರಂಭಿಸಿತು. ಇದರಿಂದಾಗಿ ಪಂದ್ಯಕ್ಕೆ ಅಡಚಣೆಯುಂಟಾಗಿದೆ.

ಪಂದ್ಯ ರದ್ದಾದರೆ ಯಾರು ಫೈನಲ್ಗೆ?

ಹಾಗೊಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಪಂಜಾಬ್ ಹಾಗೂ ಮುಂಬೈ ತಂಡಗಳ ಪೈಕಿ ಯಾವ ತಂಡವು ಫೈನಲ್ಗೆ ಪ್ರವೇಶಿಸಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಒಂದು ವೇಳೆ ಪಂದ್ಯ ರದ್ದಾದರೆ ಅಂಕಪಟ್ಟಿಯಲ್ಲಿ ಮುಂಬೈಗಿಂತಲೂ ಉತ್ತಮ ಸ್ಥಾನದಲ್ಲಿರುವ ಪಂಜಾಬ್ ಫೈನಲ್ಗೆ ಲಗ್ಗೆ ಇಡಲಿದೆ.

ಎಲ್ಲ 14 ಲೀಗ್ ಪಂದ್ಯಗಳ ಅಂತ್ಯಕ್ಕೆ ಪಂಜಾಬ್ ಕಿಂಗ್ಸ್ ಅಗ್ರಸ್ಥಾನ ಗಳಿಸಿದ್ದರೆ ಮುಂಬೈ, ನಾಲ್ಕನೇ ತಂಡವಾಗಿ ಪ್ಲೇ-ಆಫ್ಗೆ ಅರ್ಹತೆ ಗಿಟ್ಟಿಸಿಕೊಂಡಿತ್ತು.

ಮೀಸಲು ದಿನ ಇದೆಯೇ ?

ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಯಾವುದೇ ಮೀಸಲು ದಿನ ಇರುವುದಿಲ್ಲ. 120 ನಿಮಿಷಗಳ ಬಳಿಕ ಓವರ್ಗಳ ಸಂಖ್ಯೆಯಲ್ಲೂ ಕಡಿತವುಂಟಾಗದಲಿದೆ.

ನಿಗದಿತ ಅವಧಿಯಲ್ಲಿ ಪಂದ್ಯ ಪೂರ್ಣಗೊಳಿಸಲು ಪ್ರಯತ್ನ ನಡೆಯಲಿದೆ. ಕನಿಷ್ಠ ಐದು ಓವರ್ಗಳ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ ಪಂದ್ಯ ರದ್ದಾಗಲಿದೆ.
.IPL 2025 Qualifier 2 | ಮುಂಬೈಗೆ ನಿರಾಸೆ: ಫೈನಲ್ಗೆ ಲಗ್ಗೆಯಿಟ್ಟ ಶ್ರೇಯಸ್ ಪಡೆ.IPL 2023 GT vs MI| ಹಾರ್ದಿಕ್ ಬಳಗಕ್ಕೆ ರೋಹಿತ್ ಪಡೆ ಸವಾಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.