* IPL 2025 | ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿ ತಲಾ 19 ಪಾಯಿಂಟ್ ಕಲೆಹಾಕಿರುವ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಇಂದು ಮೊದಲ ಕ್ವಾಲಿಫೈಯರ್ನಲ್ಲಿ ಮುಖಾಮುಖಿಯಾಗಲಿವೆ. ಗೆದ್ದು ಫೈನಲ್ ತಲುಪುವ ಮೊದಲ ತಂಡ ಯಾವುದು?#IPL2025#IPL#RCB#ViratKohli#Cricket#PBKSvsRCB#PunjabKings
ಮುಲ್ಲನಪುರದಲ್ಲಿ ಬೇಸಿಗೆಯ ಕಾವು ಜೋರಾಗಿದೆ. ಪಂದ್ಯ ನಡೆಯಲಿರುವ ದಿನ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಹವಾಮಾನ ಮನ್ಸೂಚನೆಗಳಿವೆ. ಈ ಕ್ರೀಡಾಂಗಣದಲ್ಲಿ ನಡೆದ ಕಳೆದೆರಡೂ ಪಂದ್ಯಗಳ ಮೂರು ಇನಿಂಗ್ಸ್‌ಗಳಲ್ಲಿ 200 ರನ್‌ಗಳಿಗಿಂತಲೂ ಹೆಚ್ಚಿನ ಮೊತ್ತಗಳು ದಾಖಲಾಗಿವೆ. ಆದ್ದರಿಂದ ಈ ಪಂದ್ಯದಲ್ಲಿಯೂ ರನ್ ಹೊಳೆ ಹರಿಯುವ ಎಲ್ಲ ಸಾಧ್ಯತೆಗಳೂ ಇವೆ.