ಮುಂಬೈ: ಇಲ್ಲಿನ ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ನಡೆದ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ವಿರುದ್ಧ ಬೃಹತ್ ಗುರಿ ಬೆನ್ನಟ್ಟಿ ಗೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್ ತಂಡವು 13 ವರ್ಷಗಳ ಬಳಿಕ ಐಪಿಎಲ್ ಆವೃತ್ತಿಯಲ್ಲಿ ತನ್ನ ಕೋಟಾದ ಚೊಚ್ಚಲ ಪಂದ್ಯ ಗೆದ್ದ ದಾಖಲೆ ಮಾಡಿತು.

221 ರನ್ಗಳ ಬೃಹತ್ ಗುರಿ ಬೆನ್ನಟ್ಟಿದ ಮುಂಬೈ ತಂಡಕ್ಕೆ ಆರಂಭಿಕರಾದ ರೋಹಿತ್ ಶರ್ಮಾ (78 ರನ್, 38ಎ, 6X6, 4X6) ಹಾಗೂ ರಿಯಾನ್ ರಿಕಲ್ಟನ್ (81ರನ್, 43ಎ, 4X4, 6X8) ಮೂಲಕ 151 ರನ್ಗಳ ಜೊತೆಯಾಟ ಆಡಿದರು. ನಂತರ ಬಂದ ಸೂರ್ಯಕುಮಾರ್ ಯಾದವ್ (16 ರನ್) ಸಿಡಿಸಿ ಔಟ್ ಆದರು.

ಕೊನೆಯಲ್ಲಿ, ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ತಿಲಕ್ ವರ್ಮಾ ಪಂದ್ಯವನ್ನು ಗೆಲುವಿನತ್ತ ಮುನ್ನಡೆಸಿದರು. ಅಂತಿಮವಾಗಿ ಮುಂಬೈ ತಂಡವು 19.1 ಓವರ್ನಲ್ಲಿ 4 ವಿಕೆಟ್ ನಷ್ಟಕ್ಕೆ ಗುರಿ ತಲುಪಿ, ಈ ಬಾರಿಯ ಐಪಿಎಲ್ಗೆ ಶುಭಾರಂಭ ಮಾಡಿದೆ.

ಇದು ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ ಇತಿಹಾಸದಲ್ಲಿ ಮಾಡಿದ ಅತ್ಯಧಿಕ ರನ್ ಚೇಸ್ ಅಗಿದೆ. ಇದಕ್ಕೂ ಮೊದಲು 2021ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 219 ರನ್ ಗುರಿ ಬೆನ್ನಟ್ಟಿ ಗೆಲುವು ದಾಖಲಿಸಿತ್ತು.

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಕೋಲ್ಕತ್ತ ನೈಟ್ ರೈಡರ್ಸ್ ತಂಡಕ್ಕೆ ನಾಯಕ ಅಜಿಂಕ್ಯಾ ರಹಾನೆ ಆಸರೆಯಾದರು. ಅವರು (69 ರನ್, 40ಎ, 4X3, 6X5) ರನ್ ಕಲೆಹಾಕಿದರು. ಪರಿಣಾಮ ಕೆಕೆಆರ್ ತಂಡವು ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 220 ರನ್ ಕಲೆಹಾಕಿದೆ.

ಕೋಲ್ಕತ್ತ ನೈಟ್ ರೈಡರ್ಸ್ ತಂಡಕ್ಕೆ ಅಜಿಂಕ್ಯಾ ರಹಾನೆ ಹಾಗೂ ಫಿನ್ ಅಲೆನ್ 69 ರನ್ಗಳ ಸ್ಫೋಟಕ ಆರಂಭ ನೀಡಿದರು. ಈ ಹಂತದಲ್ಲಿ 17 ಎಸೆತಗಳಲ್ಲಿ 37 ರನ್ ಗಳಿಸಿದ್ದ ಅಲೆನ್ ಶಾರ್ದೂಲ್ ಬೌಲಿಂಗ್ನಲ್ಲಿ ವಿಕೆಟ್ ಒಪ್ಪಿಸಿದರು.

ನಂತರ ಬಂದ ಕ್ಯಾಮೆರೂನ್ ಗ್ರೀನ್ 18 ರನ್ ಬೇಗನೆ ವಿಕೆಟ್ ಒಪ್ಪಿಸಿದರು. ಆದರೆ, ವಿಕೆಟ್ ಕೀಪರ್, ಬ್ಯಾಟರ್ ಅಂಗ್ಕ್ರಿಷ್ ರಘುವಂಶಿ (51 ರನ್) ಹಾಗೂ ರಿಂಕು ಸಿಂಗ್ (ಅಜೇಯ 33) ಜೋಡಿ ಉತ್ತಮ ಜೊತೆಯಾಟ ಆಡುವ ಮೂಲಕ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ಅಂತಿಮವಾಗಿ ಮುಂಬೈ ಗೆಲುವಿಗೆ 221 ರನ್ಗಳ ಗುರಿ ನೀಡಿತು.

ಮುಂಬೈ ಪರ ಶಾರ್ದೂಲ್ ಠಾಕೂರ್ 3 ವಿಕೆಟ್ ಪಡೆದು ಮಿಂಚಿದರೆ, ಹಾರ್ದಿಕ್ ಪಾಂಡ್ಯ 1 ವಿಕೆಟ್ ಪಡೆದುಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.