ಬುಧವಾರ, ಮೇ 25, 2022
29 °C

ಐಪಿಎಲ್ ಹರಾಜು: ಸಚಿನ್ ಪುತ್ರನ ಮೂಲ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಈ ವರ್ಷದ ಐಪಿಎಲ್ ಆಟಗಾರರ ಹರಾಜಿಗೆ ವೇದಿಕೆ ಸಿದ್ಧವಾಗಿದೆ. ಈ ಬಾರಿ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಸಹ ಹರಾಜಿನಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಅರ್ಜುನ್ ತೆಂಡೂಲ್ಕರ್ ₹ 20 ಲಕ್ಷ ಮೂಲ ಬೆಲೆಯೊಂದಿಗೆ ಆಲ್‌ರೌಂಡರ್ ವಿಭಾಗದ ಹರಾಜಿನ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 164 ದೇಶೀಯ ಆಟಗಾರರು ಮತ್ತು 125 ವಿದೇಶಿ ಆಟಗಾರರು ಸೇರಿ 292 ಮಂದಿ ಹರಾಜಿನಲ್ಲಿ ಭಾಗವಹಿಸುತ್ತಿದ್ದಾರೆ.

ಇದನ್ನೂ ಓದಿ.. ಐಪಿಎಲ್‌ ಹರಾಜು: ಎಂಟು ಮಂದಿ ವಿದೇಶಿ ಆಟಗಾರರಿಗೆ ಗರಿಷ್ಠ ಮೂಲಬೆಲೆ

ಇತ್ತೀಚೆಗೆ ತಾನೆ, ಮುಷ್ತಾಕ್ ಅಲಿ ಟ್ರೋಫಿ ಮೂಲಕ ಟಿ-20 ಕ್ರಿಕೆಟ್ ಗೆ ಪದಾರ್ಪಣೆ ಮಾಡಿರುವ ಎಡಗೈ ಮಧ್ಯಮ ವೇಗದ ಬೌಲಿಂಗ್ ಮತ್ತು ಎಡಗೈ ಬ್ಯಾಟಿಂಗ್ ಮಾಡುವ ಆಲ್‌ರೌಂಡರ್ ಅರ್ಜುನ್ ತೆಂಡೂಲ್ಕರ್ ಮುಂಬೈ ಪರ ಎರಡು ಪಂದ್ಯಗಳನ್ನು ಆಡಿದ್ದು, 9.57 ಎಕಾನಮಿಯಲ್ಲಿ 2 ವಿಕೆಟ್ ಉರುಳಿಸಿದ್ದಾರೆ‌

ಫೆಬ್ರುವರಿ 20ರಂದು ಆರಂಭವಾಗಲಿರುವ ವಿಜಯ್ ಹಜಾರೆ ಟ್ರೋಫಿಗೆ ಆಯ್ಕೆಯಾಗಿರುವ ಮುಂಬೈ ತಂಡದಲ್ಲಿ ಅರ್ಜುನ್ ತೆಂಡೂಲ್ಕರ್ ಅವರಿಗೆ ಸ್ಥಾನ ಸಿಕ್ಕಿಲ್ಲ. ಹಾಗಾಗಿ, ಐಪಿಎಲ್ ಹರಾಜಿಗೂ ಮುನ್ನ ಸಚಿನ್ ಪುತ್ರನಿಗೆ ಹಿನ್ನಡೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು