ಮಂಗಳವಾರ, ಮೇ 17, 2022
26 °C

ಕ್ರಿಸ್‌ಗೆ ಜಾಕ್‌ಪಾಟ್; ಕನ್ನಡಿಗ ಗೌತಮ್‌ಗೆ ಬಂಪರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಕ್ರಿಸ್ ಮೊರಿಸ್‌ ಮತ್ತು ಕನ್ನಡಿಗ ಕೃಷ್ಣಪ್ಪ ಗೌತಮ್ ಅವರಿಗೆ ಗುರುವಾರ ಇಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯ ಆಟಗಾರರ ಹರಾಜಿನಲ್ಲಿ ಶುಕ್ರದೆಸೆ ಒಲಿಯಿತು.

ರಾಜಸ್ಥಾನ್ ರಾಯಲ್ಸ್ ತಂಡವು ₹ 16.25 ಕೋಟಿ ನೀಡಿ ಬಲಗೈ ಆಟಗಾರ ಕ್ರಿಸ್‌ ಅವರನ್ನು ಸೆಳೆದುಕೊಂಡಿತು. ಅವರ ಮೂಲಬೆಲೆ ₹ 75 ಲಕ್ಷ ನಿಗದಿ ಮಾಡಲಾಗಿತ್ತು. ಟೂರ್ನಿಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಮೌಲ್ಯಕ್ಕೆ ಹರಾಜಾದ ಆಟಗಾರನೆಂಬ ಹೆಗ್ಗಳಿಕೆ ಅವರದ್ದಾಯಿತು. ಈ ಹಿಂದೆ ಯುವರಾಜ್ ಸಿಂಗ್ (₹ 16 ಕೋಟಿ) ಮಾಡಿದ್ದ ದಾಖಲೆಯನ್ನು 30 ವರ್ಷದ ಕ್ರಿಸ್ ಮೀರಿದರು. 

ಕರ್ನಾಟಕದ ಆಲ್‌ರೌಂಡರ್ ಕೃಷ್ಣಪ್ಪ ಗೌತಮ್ ಅವರಿಗೂ ಅದೃಷ್ಟ ಒಲಿಯಿತು. ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಅವರನ್ನು ₹ 9.25 ಕೋಟಿಗೆ ಖರೀದಿಸಿತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು