ಶನಿವಾರ, ಮಾರ್ಚ್ 25, 2023
23 °C

ಚುಟುಕು ಕ್ರಿಕೆಟ್: ಡಿ.23ರಂದು ಕೊಚ್ಚಿಯಲ್ಲಿ ಐಪಿಎಲ್ ಹರಾಜು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಇಂಡಿಯನ್ ‍ಪ್ರೀಮಿಯರ್ ಲೀಗ್ (ಐಪಿಎಲ್‌) ಕ್ರಿಕೆಟ್‌ ಟೂರ್ನಿಗೆ ಆಟಗಾರರ ಹರಾಜು ಪ್ರಕ್ರಿಯೆ ಡಿಸೆಂಬರ್‌ 23ರಂದು ಕೊಚ್ಚಿಯಲ್ಲಿ ನಡೆಯಲಿದೆ. ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧಿಕಾರಿಯೊಬ್ಬರು ಬುಧವಾರ ಈ ವಿಷಯ ತಿಳಿಸಿದ್ದಾರೆ.

ಬೆಂಗಳೂರು, ನವದೆಹಲಿ, ಮುಂಬೈ, ಹೈದರಾಬಾದ್‌ ಮತ್ತು ಟರ್ಕಿಯ ಇಸ್ತಾಂಬುಲ್‌ ಹರಾಜು ಪ್ರಕ್ರಿಯೆ ನಡೆಸುವ ಸ್ಪರ್ಧೆಯಲ್ಲಿದ್ದವು. ಆದರೆ ಅಂತಿಮವಾಗಿ ಕೇರಳದ ಕಡಲತಡಿಯ ನಗರವನ್ನು ಬಿಸಿಸಿಐ ಆಯ್ಕೆ ಮಾಡಿದೆ.

‘ಉತ್ತಮ ವ್ಯವಸ್ಥೆ ಮತ್ತು ದಿನಾಂಕವನ್ನು ಪರಿಗಣಿಸಿ ಪ್ರಕ್ರಿಯೆಗೆ ಕೊಚ್ಚಿ ಸೂಕ್ತ ಆಯ್ಕೆ ಎಂದು ನಿರ್ಧರಿಸಲಾಗಿದೆ‘ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವರ್ಷ ಮಿನಿ ಹರಾಜು ಪ್ರಕ್ರಿಯೆ ಇರಲಿದೆ. 10 ಫ್ರಾಂಚೈಸ್‌ಗಳಿಗೆ ತಾವು ತಂಡದಲ್ಲಿ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಇದೇ 15ರೊಳಗೆ ಸಲ್ಲಿಸಲು ತಿಳಿಸಲಾಗಿದೆ.

2023ರ ಆವೃತ್ತಿಗೆ ತಂಡಗಳು ವಿನಿಯೋಗಿಸಬಹುದಾದ ಒಟ್ಟು ಮೊತ್ತವನ್ನು ₹ 90 ಕೋಟಿಯಿಂದ ₹ 95 ಕೋಟಿಗೆ ಹೆಚ್ಚಿಸುವ ಸಾಧ್ಯತೆಯಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು