ಭಾನುವಾರ, ಮೇ 29, 2022
31 °C

IPL: ಯುವ ಆಟಗಾರರಿಗೆ ಜೆರ್ಸಿ ನೀಡಿದ ಧೋನಿ, ಅಭಿಮಾನಿಗಳ ಮನಗೆದ್ದ ಕ್ಯಾಪ್ಟನ್ ಕೂಲ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಐಪಿಎಲ್ ಪಂದ್ಯ ಮುಗಿದ ಬಳಿಕ ಮುಂಬೈ ಇಂಡಿಯನ್ಸ್‌ ತಂಡದ ಯುವ ಆಟಗಾರರಿಗೆ ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ನಾಯಕ ಎಂ.ಎಸ್‌.ಧೋನಿ ಅವರು ಸಹಿ ಹಾಕಿರುವ ಜೆರ್ಸಿ ಹಾಗೂ ಸಲಹೆಗಳನ್ನು ನೀಡುವ ಮೂಲಕ ಗಮನ ಸೆಳೆದಿದ್ದಾರೆ. 

ಐಪಿಎಲ್ 2022 ಟೂರ್ನಿಯಲ್ಲಿ ಗುರುವಾರ ವಾಂಖೆಡೆ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಸಿಎಸ್‌ಕೆ ಸೋಲು ಅನುಭವಿಸಿತು. ಆದರೆ, ಪಂದ್ಯ ಮುಗಿದ ಬಳಿಕ ಉಭಯ ತಂಡಗಳ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಡ್ರೆಸ್ಸಿಂಗ್ ರೂಮ್‌ನಲ್ಲಿ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 

ಇದೇ ವೇಳೆ ಧೋನಿ, ಸಹಿ ಹಾಕಿರುವ ಜರ್ಸಿಯನ್ನು ಯುವ ಆಟಗಾರರಿಗೆ ನೀಡುವ ಮೂಲಕ ಉತ್ಸಾಹಿಸಿದ್ದಾರೆ. ಈ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರೀಡಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ 16 ಓವರ್‌ಗಳಲ್ಲಿ 97 ರನ್‌ಗಳಿಗೆ ಆಲೌಟ್ ಆಗಿತ್ತು. 

98 ರನ್‌ ಗುರಿ ಬೆನ್ನತ್ತಿದ ಮುಂಬೈ 14.5 ಓವರ್‌ಗಳಲ್ಲಿ ಐದು ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತ್ತು. 

ಈ ಬಾರಿಯ ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ತೋರದ ಹಿನ್ನೆಲೆಯಲ್ಲಿ ಮುಂಬೈ ಹಾಗೂ ಚೆನ್ನೈ ತಂಡಗಳು ಪ್ಲೇ-ಆಫ್‌ನಿಂದ ಹೊರಬಿದ್ದಿವೆ.

ಓದಿ... ಆತ ಟಿ–20 ವಿಶ್ವಕಪ್‌ಗೆ ಭಾರತ ತಂಡದಲ್ಲಿರಲು ಅರ್ಹ: ಹರಭಜನ್ ಸಿಂಗ್

ಓದಿ... ರಿಯಾಲಿಟಿ ಶೋ ಕೊರಿಯೊಗ್ರಾಫರ್ ಟೀನಾ ಸಿಧು ಅನುಮಾನಾಸ್ಪದ ಸಾವು 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು