ಭಾನುವಾರ, ಮೇ 16, 2021
24 °C

ಐಪಿಎಲ್ ಭವಿಷ್ಯ ನಿರ್ಧರಿಸುವುದು ಭಾರತ ಸರ್ಕಾರ, ಕ್ರಿಕೆಟ್ ಮಂಡಳಿಯಲ್ಲ: ರಿಜಿಜು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಅನ್ನು ಈ ವರ್ಷ ನಡೆಸುವ ನಿರ್ಧಾರ ಭಾರತ ಸರ್ಕಾರ ತೆಗೆದುಕೊಳ್ಳುತ್ತದೆಯೇ ಹೊರತು ಕ್ರಿಕೆಟ್ ಮಂಡಳಿಯಲ್ಲ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್‌ ರಿಜಿಜು ಭಾನುವಾರ ಹೇಳಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ಅವರು,  ಮುಂದಿನ ದಿನಗಳಲ್ಲಿ ಕೊರೊನಾ ಸೋಂಕು ನಿಯಂತ್ರಣ ಪ್ರಮಾಣದ ಮೇಲೆ ದೇಶದಲ್ಲಿ ಐಪಿಎಲ್‌ ನಡೆಸುವುದೋ, ಬೇಡವೋ ಎಂಬುದನ್ನು ಸರ್ಕಾರ ತೀರ್ಮಾನಿಸಲಿದೆ ಎಂದು ತಿಳಿಸಿದ್ದಾರೆ. 

ಸಾರ್ವಜನಿಕರ ಆರೋಗ್ಯಕ್ಕೆ ಯಾವುದೇ ಅಪಾಯವಿಲ್ಲದಿದ್ದರೆ ಮಾತ್ರ ಐಪಿಎಲ್ ನಡೆಸುವ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ರಿಜಿಜು ಸ್ಪಷ್ಟಪಡಿಸಿದ್ದಾರೆ.

'ಕ್ರೀಡಾಕೂಟಗಳು ನಡೆಯಬೇಕೆಂದು ನಾವು ಬಯಸಿದ್ದೇವೆ. ಆದರೆ, ಯಾವುದೇ ಕಾರಣಕ್ಕೂ ಸಾರ್ವಜನಿಕರ ಆರೋಗ್ಯವನ್ನು ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ. ನಮ್ಮ ಸಂಪೂರ್ಣ ಗಮನ ಕೋವಿಡ್‌-19 ವಿರುದ್ಧದ ಹೋರಾಟದ ಮೇಲಿದೆ' ಎಂದು ಕೇಂದ್ರ ಸಚಿವ ರಿಜಿಜು ತಿಳಿಸಿದ್ದಾರೆ. 

ಸುಮಾರು ₹50 ಸಾವಿರ ಕೋಟಿ ಬ್ರ್ಯಾಂಡ್ ಮೌಲ್ಯ ಹೊಂದಿರುವ ಟೂರ್ನಿಯು ಸಂಪೂರ್ಣ ರದ್ದಾದರೆ ದೊಡ್ಡ ನಷ್ಟದ ಆತಂಕವಿದೆ. ಆ ಕಾರಣ, ತೀವ್ರ ಒತ್ತಡದಲ್ಲಿರುವ ಬಿಸಿಸಿಐ ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಐಪಿಎಲ್‌ ನಡೆಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದು ಹೇಳಿತ್ತು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು