ಸೋಮವಾರ, ಮೇ 23, 2022
21 °C

ಐಪಿಎಲ್‌ ಫೈನಲ್‌: ಚೆನ್ನೈ ಸೂಪರ್‌ ಕಿಂಗ್ಸ್‌ಗೆ 150 ರನ್‌ಗಳ ಗೆಲುವಿನ ಗುರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ಇಲ್ಲಿನ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯುತ್ತಿರುವ ಐಪಿಎಲ್‌ ಫೈನಲ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವು ಚೆನ್ನೈ ಸೂಪರ್‌ ಕಿಂಗ್ಸ್‌ಗೆ 150 ರನ್‌ಗಳ ಗೆಲುವಿನ ಗುರಿ ನೀಡಿದೆ. 

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಮುಂಬೈ ಇಂಡಿಯನ್ಸ್‌ ಸಾಧಾರಣ ಮೊತ್ತವನ್ನು ಕಲೆ ಹಾಕಿತು. ಚೆನ್ನೈ ಬೌಲಿಂಗ್ ಎದುರು ರನ್‌ಗಳಿಸಲು ಪರದಾಡಿದ ಮುಂಬೈ ಇಂಡಿಯನ್ಸ್‌ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 149 ರನ್‌ಗಳಿಸಿತು. 

ಆರಂಭಿಕ ಬ್ಯಾಟ್ಸ್‌ಮನ್‌ ಕ್ವಿಂಟನ್ ಡಿ ಕಾಕ್ ಚೆನ್ನೈ ಬೌಲರ್‌ಗಳಿಗೆ ಪ್ರತಿರೋಧ ತೋರಿದರಾದರೂ ಹೆಚ್ಚು ಹೊತ್ತು ಕ್ರಿಸ್‌ನಲ್ಲಿ ನಿಲ್ಲದೆ 29 ರನ್ ಗಳಿಸಿ ಔಟಾದರು. ಮಧ್ಯಮ ಕ್ರಮಾಂಕದಲ್ಲಿ ಕಿರ್‌ನ್‌ ಪೋಲಾರ್ಡ್‌ 46 ರನ್‌ ಗಳಿಸಿದರು. 

ವೇಗಿಗಳಾದ ದೀಪಕ್‌ ಚಾಹರ್ 3 ವಿಕೆಟ್‌, ಶಾರ್ದೂಲಾ ಠಾಕೂರ್ 2 ವಿಕೆಟ್‌ ಪಡೆದರು. ಸ್ಪಿನ್‌ ಬೌಲರ್‌ ಇಮ್ರಾನ್‌ ತಾಹೀರ್ 2 ವಿಕೆಟ್‌ ಪಡೆಯುವ ಮೂಲಕ ಮುಂಬೈ ಇಂಡಿಯನ್ಸ್‌ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿ ಹಾಕಿದರು. 

ಈ ಟ್ರೋಫಿಯನ್ನು ಗೆಲ್ಲಲು ಚೆನ್ನೈ ಸೂಪರ್ ಕಿಂಗ್ಸ್‌ 150 ರನ್‌ ಗಳಿಸಬೇಕಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು