ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಭಾನುವಾರದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೊನೆಯ ಹಂತದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂ.ಎಸ್.ಧೋನಿ ಅವರನ್ನು ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಹಾಡಿ ಹೊಗಳಿದ್ದಾರೆ.
ಪಂದ್ಯದ ಮುಕ್ತಾಯದ ಬಳಿಕ ಟ್ವೀಟ್ ಮಾಡಿರುವ ಕೊಹ್ಲಿ, ‘ಕಿಂಗ್ ಈಸ್ ಬ್ಯಾಕ್. ಇವರು ಪಂದ್ಯದ ಅತ್ಯುತ್ತಮ ಫಿನಿಷರ್. ಈ ರಾತ್ರಿ ನಾನು ಮತ್ತೊಮ್ಮೆ ಕುಳಿತಲ್ಲಿಂದ ಎದ್ದು ಜಿಗಿಯುವಂತಾಯಿತು’ ಎಂದು ಧೋನಿ ಅವರನ್ನು ಟ್ಯಾಗ್ ಮಾಡಿ ಉಲ್ಲೇಖಿಸಿದ್ದಾರೆ.
ಆಟದ ಕೊನೆಯ ಎಸೆತದಲ್ಲಿ ಸಿಕ್ಸರ್ ಮೂಲಕ ತಂಡಕ್ಕೆ ಗೆಲುವು ತಂದುಕೊಡುವುದು ಅಥವಾ ಕೊನೆಯ ಹಂತದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಡುವುದು ಧೋನಿ ವಿಶೇಷತೆ. ಭಾನುವಾರದ ಪಂದ್ಯದ ಕೊನೆಯಲ್ಲಿ ತಮ್ಮ ನೈಜ ಆಟ ಪ್ರದರ್ಶಿಸಿದ ಧೋನಿ ಕೇವಲ ಆರು ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 18 ರನ್ ಗಳಿಸಿ ಔಟಾಗದೆ ಉಳಿದಿದ್ದರು.
ಡೆಲ್ಲಿ ವಿರುದ್ಧ ಜಯ ಗಳಿಸಿರುವ ಚೆನ್ನೈ ಐಪಿಎಲ್ ಫೈನಲ್ ಪ್ರವೇಶಿಸಿದೆ. ಇದರೊಂದಿಗೆ ಚೆನ್ನೈ ತಂಡವು 9ನೇ ಬಾರಿಗೆ ಫೈನಲ್‌ಗೆ ಲಗ್ಗೆ ಇಟ್ಟಂತಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.