ಗುರುವಾರ , ಅಕ್ಟೋಬರ್ 22, 2020
22 °C

IPL-2020 | RCB vs RR: ಪಂದ್ಯ ಗೆದ್ದು ಅಗ್ರಸ್ಥಾನಕ್ಕೇರಿದ ಆರ್‌ಸಿಬಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಬುಧಾಬಿ: ರಾಜಸ್ಥಾನ ರಾಯಲ್ಸ್‌ ನೀಡಿದ ಸವಾಲಿನ ಗುರಿ ಎದುರು ದಿಟ್ಟ ಬ್ಯಾಟಿಂಗ್ ಪ್ರದರ್ಶನ ನೀಡಿದ ಆರ್‌ಸಿಬಿ ಇನ್ನೂ 5 ಎಸೆತಗಳು ಬಾಕಿ ಇರುವಂತೆಯೇ 8 ವಿಕೆಟ್‌ ಅಂತರದಿಂದ ಗೆದ್ದು ಬೀಗಿತು. ಈ ಜಯದೊಂದಿಗೆ ಆರ್‌ಸಿಬಿ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 154 ರನ್‌ ಗಳಿಸಿತ್ತು. ಈ ಗುರಿ ಎದುರು ಆರ್‌ಸಿಬಿಯ ಯುವ ಪ್ರತಿಭೆ ದೇವದತ್ತ ಪಡಿಕ್ಕಲ್‌ ಮತ್ತು ನಾಯಕ ವಿರಾಟ್‌ ಕೊಹ್ಲಿ ನಿರಾಯಾಸವಾಗಿ ಬ್ಯಾಟ್‌ ಬೀಸಿದರು.

45 ಎಸೆತಗಳನ್ನು ಎದುರಿಸಿದ ಪಡಿಕ್ಕಲ್‌ 1 ಸಿಕ್ಸರ್‌ ಮತ್ತು 6 ಬೌಂಡರಿ ಸಹಿತ 63 ರನ್‌ ಗಳಿಸಿ ಔಟಾದರೆ, ಕೊನೆವರೆಗೂ ಆಡಿದ ಕೊಹ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದರು. 52 ಎಸೆತಗಳನ್ನು ಎದುರಿಸಿದ ಕೊಹ್ಲಿ 2 ಸಿಕ್ಸರ್‌, 7 ಬೌಂಡರಿ ಸಹಿತ 72 ರನ್ ಬಾರಿಸಿದರು. ಇದು ಐಪಿಎಲ್‌ನಲ್ಲಿ ಅವರು ಗಳಿಸಿಕೊಂಡ 37ನೇ ಅರ್ಧಶತಕ.

ಇದರೊಂದಿಗೆ ಆರ್‌ಸಿಬಿ ಟೂರ್ನಿಯಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವು ಸಾಧಿಸಿ ಪಾಯಿಂಟ್‌ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಏರಿದೆ. ರಾಜಸ್ಥಾನ 5ರಿಂದ 6ನೇ ಸ್ಥಾನಕ್ಕೆ ಕುಸಿದಿದೆ.

ಆರ್‌ಸಿಬಿ ತನ್ನ ಮುಂದಿನ ಪಂದ್ಯದಲ್ಲಿ ಅ.5ರಂದು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಆಡಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು