ಸೋಮವಾರ, ಅಕ್ಟೋಬರ್ 18, 2021
22 °C

ದೇವರು ನೀಡಿರುವ ಪ್ರತಿಭೆ ವ್ಯರ್ಥವಾಗಬಾರದು: ಸಂಜು ಸ್ಯಾಮ್ಸನ್‌ಗೆ ಗವಾಸ್ಕರ್‌ ಸಲಹೆ

ಪ್ರಜಾವಾಣಿ ವೆಬ್‌‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ದುಬೈ: ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡವು ಪಂಜಾಬ್ ಕಿಂಗ್ಸ್‌ ವಿರುದ್ಧ ಎರಡು ರನ್‌ಗಳ ಜಯಸಾಧಿಸಿದೆ. ಆದರೆ, ಸಂಜು ಸ್ಯಾಮ್ಸನ್ ಮತ್ತೊಮ್ಮೆ ವೈಫಲ್ಯ ಅನುಭವಿಸಿದ್ದಾರೆ.

ಈ ವಿಚಾರದ ಕುರಿತು ಸ್ಟಾರ್ ಸ್ಪೋರ್ಟ್ಸ್ ವಾಹಿನಿಯಲ್ಲಿ ಮಾತನಾಡಿರುವ ಮಾಜಿ ಕ್ರಿಕೆಟಿಗ ಸುನೀಲ್‌ ಗವಾಸ್ಕರ್‌, 'ದೇವರು ನೀಡಿರುವ ಪ್ರತಿಭೆ ವ್ಯರ್ಥವಾಗಬಾರದು' ಎಂದು ಸ್ಯಾಮ್ಸನ್‌ ಅವರಿಗೆ ಸಲಹೆ ನೀಡಿದ್ದಾರೆ.

'26 ವರ್ಷದ ಸ್ಯಾಮ್ಸನ್‌ ಅವರು 2015ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ. ಆದರೆ, ಅಂದಿನಿಂದ ಕೇವಲ ಒಂದು ಏಕದಿನ ಮತ್ತು ಹತ್ತು ಟಿ 20 ಪಂದ್ಯಗಳಲ್ಲಿ ಮಾತ್ರ ಆಡಿದ್ದಾರೆ. ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮುಂದುವರಿಯಬೇಕೆಂದರೆ, ತಮ್ಮ ಮನೋಧರ್ಮವನ್ನು ಬದಲಿಸಿಕೊಳ್ಳಬೇಕು. ಶಾಟ್‌ ಆಯ್ಕೆ ವಿಚಾರದಲ್ಲಿ ಸ್ಯಾಮ್ಸನ್‌ ಹೆಚ್ಚು ಕೆಲಸ ಮಾಡಬೇಕಾಗುತ್ತದೆ' ಎಂದು ಗವಾಸ್ಕರ್‌ ಹೇಳಿದ್ದಾರೆ.

ಇದನ್ನೂ ಓದಿ... PBKS vs RR: ಪಂಜಾಬ್ ವಿರುದ್ಧ ರಾಜಸ್ಥಾನ್‌ಗೆ 2 ರನ್‌ ಅಂತರದ ಭರ್ಜರಿ ಜಯ

ಐಪಿಎಲ್ 2021 ರಲ್ಲಿ ಈಗಾಗಲೇ ಶತಕ ದಾಖಲಿಸಿದ್ದರೂ, ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಸ್ಯಾಮ್ಸನ್ ಏಳನೇ ಸ್ಥಾನದಲ್ಲಿದ್ದಾರೆ. ಎಂಟು ಪಂದ್ಯಗಳಲ್ಲಿ ಕೇವಲ 281 ರನ್‌ ಗಳಿಸುವಲ್ಲಿ ಅವರು ಸಫಲರಾಗಿದ್ದಾರೆ..

ಅಬುಧಾಬಿಯಲ್ಲಿ ಶನಿವಾರ ನಡೆಯಲಿರುವ ಪಂದ್ಯದಲ್ಲಿ, ರಾಜಸ್ಥಾನ್‌ ರಾಯಲ್ಸ್‌ (ಆರ್‌ಆರ್) ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ಅನ್ನು ಎದುರಿಸಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು