ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್ ಕ್ರಿಕೆಟ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಳು ಪಂದ್ಯಗಳಿಗೆ ಆತಿಥ್ಯ

ಮುಂಬೈನಲ್ಲಿ ಕೊನೆಯ ಲೀಗ್ ಪಂದ್ಯ
Last Updated 19 ಮಾರ್ಚ್ 2019, 19:55 IST
ಅಕ್ಷರ ಗಾತ್ರ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಲೀಗ್ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಲಾಯಿತು. ಮಾರ್ಚ್ 23 ರಿಂದ ಮೇ 5ರವರೆಗೆ ಲೀಗ್ ಪಂದ್ಯಗಳು ನಡೆಯಲಿವೆ. ಬೆಂಗಳೂರಿನಲ್ಲಿ ಒಟ್ಟು ಏಳು ಪಂದ್ಯಗಳು ನಡೆಯಲಿವೆ.

ಹೋದ ವಾರ ಟೂರ್ನಿಯ ಮೊದಲ ಎರಡು ವಾರಗಳ ವೇಳಾಪಟ್ಟಿಯನ್ನು ಮಾತ್ರ ಐಪಿಎಲ್ ಸಮಿತಿಯು ಬಿಡುಗಡೆ ಮಾಡಿತ್ತು. ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ ನಂತರ ಐಪಿಎಲ್‌ನ ಸಂಪೂರ್ಣ ಪಟ್ಟಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಪ್ಲೇ ಆಫ್‌ ಮತ್ತು ಫೈನಲ್ ಪಂದ್ಯಗಳ ವೇಳಾಪಟ್ಟಿ ಮತ್ತು ಸ್ಥಳಗಳನ್ನು ಇನ್ನೂ ಪ್ರಕಟಿಸಿಲ್ಲ. ಬಹುತೇಕ ಮೇ 12ಕ್ಕೆ ಫೈನಲ್ ಪಂದ್ಯ ನಡೆಯುವ ಸಾಧ್ಯತೆ ಇದೆ.

ಮಾರ್ಚ್ 23ರಂದು ಚೆನ್ನೈನ ಚೆಪಾಕ್‌ನಲ್ಲಿ ನಡೆಯಲಿರುವ ಉದ್ಘಾ ಟನೆ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸವಾಲನ್ನು ಎದುರಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT