ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟ್ಲಾದಲ್ಲಿ ಸ್ಪಿನ್ನರ್‌ಗಳು ಮಿಂಚುವ ಭರವಸೆ

Last Updated 29 ಮಾರ್ಚ್ 2019, 18:29 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಫಿರೋಜ್‌ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆಯಲಿರುವ ಐಪಿಎಲ್‌ ಪಂದ್ಯದಲ್ಲಿ ಸ್ಪಿನ್ನರ್‌ಗಳು ಮಿಂಚುವ ಸಾಧ್ಯತೆ ಇದೆ. ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿರುವ ಕೋಲ್ಕತ್ತ ನೈಟ್ ರೈಡರ್ಸ್‌ ಇದರ ಲಾಭ ಪಡೆದುಕೊಳ್ಳಲು ಪ್ರಯತ್ನಿಸಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ಆಡಿದ ಎರಡು ಪಂದ್ಯಗಳಲ್ಲಿ ಒಂದನ್ನು ಗೆದ್ದಿದೆ. ತವರಿನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಎದುರಿನ ಪಂದ್ಯವನ್ನು ಸೋತಿದೆ. ಆ ಪಂದ್ಯದಲ್ಲಿ ಸ್ಪಿನ್ನರ್‌ಗಳಿಗೆ ನೆರವಾಗುವ ಪಿಚ್‌ನ ಲಾಭ ಪಡೆದುಕೊಳ್ಳುವಲ್ಲಿ ಮಹೇಂದ್ರ ಸಿಂಗ್ ಧೋನಿ ಬಳಗ ಯಶಸ್ವಿಯಾಗಿತ್ತು.

ಕೋಲ್ಕತ್ತ ನೈಟ್ ರೈಡರ್ಸ್‌ ವಿಶ್ವ ಪ್ರಸಿದ್ಧ ಸ್ಪಿನ್ನರ್‌ಗಳನ್ನು ಹೊಂದಿರುವುದರಿಂದ ಶನಿವಾರದ ಪಂದ್ಯದಲ್ಲಿ ಆತಿಥೇಯರು ಯಾವ ತಂತ್ರಕ್ಕೆ ಮೊರೆ ಹೋಗುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ. ಕುಲದೀಪ್ ಯಾದವ್, ಸುನಿಲ್ ನಾರಾಯಣ್‌ ಮತ್ತು ಪೀಯೂಷ್ ಚಾವ್ಲಾ ಅವರು ಕ್ಯಾಪಿಟಲ್ಸ್ ತಂಡದ ಬ್ಯಾಟ್ಸ್‌ಮನ್‌ಗಳಿಗೆ ಸವಾಲಾಗಲಿದ್ದಾರೆ.

ಕ್ಯಾಪಿಪಟ್ಸ್ ಬ್ಯಾಟಿಂಗ್ ವಿಭಾಗ ಶಿಖರ್ ಧವನ್ ಮತ್ತು ರಿಷಭ್ ಪಂತ್ ಮೇಲೆ ಅವಲಂಬಿತವಾಗಿದೆ. ಮೊದಲ ಪಂದ್ಯದಲ್ಲಿ 27 ಎಸೆತಗಳಲ್ಲಿ 78 ರನ್‌ ಗಳಿಸಿದ ರಿಷಭ್ ಪಂತ್ ತಂಡದ ಗೆಲುವಿಗೆ ಕಾರಣರಾಗಿದ್ದರು.

ಆದರೆ ಕೋಲ್ಕತ್ತಾ ತಂಡದ ಬ್ಯಾಟ್ಸ್‌ಮನ್‌ಗಳಾದ ನಿತೀಶ್‌ ರಾಣಾ, ಆ್ಯಂಡ್ರೆ ರಸೆಲ್‌, ರಾಬಿನ್ ಉತ್ತಪ್ಪ ಮುಂತಾದವರನ್ನು ಕಟ್ಟಿಹಾಕಬೇಕಾದರೆ ಸ್ಪಿನ್ನರ್‌ಗಳಾದ ಅಕ್ಷರ್‌ ಪಟೇಲ್‌, ರಾಹುಲ್ ತೇವತಿಯಾ ಮತ್ತು ಅಮಿತ್ ಮಿಶ್ರಾ ಮತ್ತು ವೇಗಿ ಕಗಿಸೊ ರಬಾಡ ಮಿಂಚಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT