ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ 18ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ಸ್ ಕಿಂಗ್ಸ್(ಸಿಎಸ್ಕೆ) ತಂಡವು 20 ಓವರ್ಗಳ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿದೆ.

ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಗೆಲುವು ದಾಖಲಿಸಲು ಡೆಲ್ಲಿ ಕ್ಯಾಪಿಟಲ್ಸ್ ತಂಡವು 213 ರನ್ ಗಳಿಸಬೇಕಿದೆ.

ಮೊದಲ ಮೂರು ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದ ಆರಂಭಿಕ ಬ್ಯಾಟರ್ ಸಂಜು ಸ್ಯಾಮ್ಸನ್, ಡೆಲ್ಲಿ ವಿರುದ್ಧ ಶತಕ ಸಿಡಿಸಿದರು. 56 ಎಸೆತಗಳಲ್ಲಿ 15 ಬೌಂಡರಿ ಹಾಗೂ 4 ಸಿಕ್ಸರ್ಗಳ ನೆರವಿನೊಂದಿಗೆ ಅಜೇಯ 115 ರನ್ ಗಳಿಸಿದರು. ಇದು ಈ ಆವೃತ್ತಿಯಲ್ಲಿ ದಾಖಲಾದ ಮೊದಲ ಶತಕವಾಗಿದೆ.

ಯುವ ಬ್ಯಾಟರ್ ಆಯುಷ್ ಮ್ಹಾತ್ರೆ, ಕೇವಲ 36 ಎಸೆತಗಳಲ್ಲಿ 59 ರನ್ ಗಳಿಸಿ ಗಾಯಗೊಂಡು ನಿವೃತ್ತರಾದರು. ಶಿವಂ ದುಬೆ, ಕೇವಲ 10 ಎಸೆತಗಳಲ್ಲಿ 20 ರನ್ ಗಳಿಸಿದರು.

ಡೆಲ್ಲಿ ಪರ ನಾಯಕ ಅಕ್ಷರ್ ಪಟೇಲ್ ಮಾತ್ರ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಅವರು ಸಿಎಸ್ಕೆ ನಾಯಕ ಋತುರಾಜ್ ಗಾಯಕ್ವಾಡ್(15 ರನ್) ವಿಕೆಟ್ ಕಬಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.