ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ 62ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 193 ರನ್ ಗಳಿಸಿದೆ.

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಗೆಲುವು ದಾಖಲಿಸಲು ಡೆಲ್ಲಿ ಕ್ಯಾಪಿಟಲ್ಸ್ ತಂಡವು 194 ರನ್ ಗಳಿಸಬೇಕಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಬಂದ ರಾಜಸ್ಥಾನ ತಂಡದ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್(12 ರನ್) ವಿಕೆಟ್ ಪಡೆಯುವ ಮೂಲಕ ಲುಂಗಿ ಎನ್ಗಿಡಿ ಆರಂಭಿಕ ಆಘಾತ ನೀಡಿದರು. ವೈಭವ್ ಸೂರ್ಯವಂಶಿ (46 ರನ್: 21 ಎಸೆತ) ಎಂದಿನಂತೆ ಸ್ಪೋಟಕ ಆಟವಾಡಿದರು.

ನಾಯಕ ರಿಯಾನ್ ಪರಾಗ್ (51 ರನ್: 26 ಎಸೆತ), ಧ್ರುವ್ ಜುರೆಲ್ (53 ರನ್: 40 ಎಸೆತ) ಅರ್ಧಶತಕಗಳಿಸುವ ಮೂಲಕ ತಂಡದ ಮೊತ್ತವನ್ನು 190ರ ಗಡಿದಾಟಿಸಿದರು.

ಡೆಲ್ಲಿ ಪರ ಮಿಚೆಲ್ ಸ್ಟಾರ್ಕ್ 4 ವಿಕೆಟ್, ಲುಂಗಿ ಎನ್ಗಿಡಿ, ಮಾಧವ್ ತಿವಾರಿ 2 ವಿಕೆಟ್ ಪಡೆದರು.

ಪ್ಲೇ ಆಫ್ ರೇಸ್ನಲ್ಲಿ ಉಳಿಯಲು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.