ಅಹಮದಾಬಾದ್: ಐಪಿಎಲ್ ಫೈನಲ್ ಪಂದ್ಯದಲ್ಲಿ ನಿಯಮ ಉಲ್ಲಂಘನೆ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟಿಮ್ ಡೇವಿಡ್ ಅವರಿಗೆ ಪಂದ್ಯದ ಸಂಭಾವನೆಯ ಶೇ 50ರಷ್ಟು ದಂಡ ಹಾಗೂ 2027ರ ಟೂರ್ನಿಯಲ್ಲಿ ಒಂದು ಪಂದ್ಯದಿಂದ ನಿಷೇಧ ಹೇರಲಾಗಿದೆ.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದಿದ್ದ ಫೈನಲ್ ಪಂದ್ಯದ ವೇಳೆ ಗುಜರಾತ್ ಟೈಟನ್ಸ್ ಇನ್ನಿಂಗ್ಸ್ನ 10ನೇ ಓವರ್ನಲ್ಲಿ ಅಂಪೈರ್ ನಿತಿನ್ ಮೆನನ್ ಅವರ ಕಡೆಗೆ ಆಕ್ರಮಣಕಾರಿಯಾಗಿ ಐಸ್ ಬ್ಯಾಗ್ ಎಸೆದಿದ್ದಕ್ಕಾಗಿ ಡೇವಿಡ್ ಅವರಿಗೆ ಈ ಶಿಕ್ಷೆ ನೀಡಲಾಗಿದೆ. ಜೊತೆಗೆ ಎರಡು ಡಿಮೆರಿಟ್ ಅಂಕಗಳನ್ನೂ ನೀಡಲಾಗಿದೆ.

30 ವರ್ಷದ ಡೇವಿಡ್ ಅವರು ಐಪಿಎಲ್ ನೀತಿಸಂಹಿತೆಯ ವಿಧಿ 2.9 ಅನ್ನು ಉಲ್ಲಂಘಿಸಿದ್ದಾರೆ ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-4-1515542244

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.