ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024 |KKR vs MI: ಕೋಲ್ಕತ್ತಕ್ಕೆ ಅಗ್ರಸ್ಥಾನ ಉಳಿಸಿಕೊಳ್ಳುವ ಛಲ

Published 10 ಮೇ 2024, 23:50 IST
Last Updated 10 ಮೇ 2024, 23:50 IST
ಅಕ್ಷರ ಗಾತ್ರ

ಕೋಲ್ಕತ್ತ: ಎರಡು ಬಾರಿಯ ಐಪಿಎಲ್ ಚಾಂಪಿಯನ್ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಶನಿವಾರ ಮುಂಬೈ ಇಂಡಿಯನ್ಸ್ ಎದುರು ಕಣಕ್ಕಿಳಿಯಲಿದೆ. 

16 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿರುವ ಕೋಲ್ಕತ್ತ ತಂಡವು ಈಗಾಗಲೇ ಪ್ಲೇ ಆಫ್‌ ಸ್ಥಾನ ಖಚಿತಪಡಿಸಿಕೊಂಡಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ತಂಡವು ಹೊರಬಿದ್ದಾಗಿದೆ.  ಆದರೆ ಕೋಲ್ಕತ್ತ ತಂಡವು ತನ್ನ ಗೆಲುವಿನ ಲಯವನ್ನು ಮುಂದುವರಿಸಿ ಅಗ್ರಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳುವ ಛಲದಲ್ಲಿದೆ. ಅದೇ ಮುಂಬೈ ತಂಡವು ಸಮಾಧಾನಕರ ಗೆಲುವಿಗಾಗಿ ಹಂಬಲಿಸುತ್ತಿದೆ. 

ಸುನಿಲ್ ನಾರಾಯಣ, ಆ್ಯಂಡ್ರೆ ರಸೆಲ್, ನಿತೀಶ್ ರೆಡ್ಡಿ, ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ನಾಯಕ ಶ್ರೇಯಸ್ ಅಯ್ಯರ್, ಅಂಗಕ್ರಿಷ್ ರಘುವಂಶಿ ಅವರೆಲ್ಲರೂ ರನ್ ಹೊಳೆ ಹರಿಸುತ್ತಿರುವ ಬ್ಯಾಟರ್‌ಗಳಾಗಿದ್ದಾರೆ. ಬೌಲಿಂಗ್‌ನಲ್ಲಿ ಮಿಚೆಲ್ ಸ್ಟಾರ್ಕ್‌ ಲಯಕ್ಕೆ ಮರಳಿದ್ದಾರೆ.  ಹರ್ಷಿತ್ ರಾಣಾ, ಸ್ಪಿನ್ನರ್ ವರುಣ್ ಚಕ್ರವರ್ತಿ  ಹಾಗೂ ಸುನಿಲ್ ತಂಡದ ಬೌಲಿಂಗ್ ಶಕ್ತಿಯಾಗಿದ್ದಾರೆ. 

ಮುಂಬೈ ತಂಡದಲ್ಲಿ ಸೂರ್ಯಕುಮಾರ್ ಯಾದವ್ ಅದ್ಭುತ ಲಯದಲ್ಲಿದ್ದಾರೆ. ಇಶಾನ್ ಕಿಶನ್, ರೋಹಿತ್ ಶರ್ಮಾ ಅವರು ಉತ್ತಮ ಆರಂಭ ನೀಡಿದರೆ, ಸೂರ್ಯ, ಟಿಮ್ ಡೇವಿಡ್,  ತಿಲಕ್ ವರ್ಮಾ ಹಾಗೂ ನಾಯಕ ಹಾರ್ದಿಕ್ ಅವರು ಮಧ್ಯಮ ಕ್ರಮಾಂಕಕ್ಕೆ ಬಲ ತುಂಬಬಲ್ಲರು. 

ಜಸ್‌ಪ್ರೀತ್ ಬೂಮ್ರಾ ನಾಯಕತ್ವದ ಬೌಲಿಂಗ್ ಪಡೆಯು ಕೋಲ್ಕತ್ತ ಬ್ಯಾಟರ್‌ಗಳಿಗೆ ಕಡಿವಾಣ ಹಾಕುವ ಸಾಮರ್ಥ್ಯ ಹೊಂದಿದೆ.  ಒಂದು ವಾರದ ಹಿಂದೆ ನಡೆದಿದ್ದ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು. ಆಗಲೂ ಕೋಲ್ಕತ್ತ ಜಯಿಸಿತ್ತು. ಆ ಸೋಲಿಗೆ ಮುಯ್ಯಿ ತೀರಿಸಿಕೊಳ್ಳುವ ಛಲದಲ್ಲಿ ಹಾರ್ದಿಕ್ ಬಳಗ ಇದೆ.  

ಕೋಲ್ಕತ್ತ ತಂಡಕ್ಕೆ ಇದೂ ಸೇರಿದಂತೆ ಇನ್ನೂ ಮೂರು ಪಂದ್ಯಗಳು ಬಾಕಿಯಿವೆ.  ಈ ಹಿಂದೆ ಕೋಲ್ಕತ್ತ ತಂಡವು ಪ್ರಶಸ್ತಿ ಜಯಿಸಿದಾಗ ನಾಯಕರಾಗಿದ್ದ ಗೌತಮ್ ಗಂಭೀರ್ ಈಗ ಮೆಂಟರ್ ಆಗಿದ್ದಾರೆ. ತೆರೆಯ ಹಿಂದಿನ ‘ನಾಯಕ’ನಾಗಿ ಪ್ರಶಸ್ತಿ ಜಯಿಸುವ ಕನಸು ಕಾಣುತ್ತಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್   –ಪಿಟಿಐ ಚಿತ್ರ 
ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್   –ಪಿಟಿಐ ಚಿತ್ರ 

ಪಂದ್ಯ ಆರಂಭ: ರಾತ್ರಿ 7.30

ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್, ಜಿಯೊ ಸಿನಿಮಾ ಆ್ಯಪ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT