ಕೊಲಂಬೊ: ಐಪಿಎಲ್ನಲ್ಲಿ ಆಡಲು ನಿರಾಕ್ಷೇಪಣಾ ಪತ್ರ ನೀಡಲು ನಿರಾಕರಿಸಿದ್ದ ಶ್ರೀಲಂಕಾ ಕ್ರಿಕೆಟ್ ಮಂಡಳಿಯ (ಎಸ್ಎಲ್ಸಿ) ಕ್ರಮವನ್ನು ಪ್ರಶ್ನಿಸಿ, ಕೋರ್ಟ್ ಮೊರೆ ಹೋಗಿದ್ದ ವೇಗದ ಬೌಲರ್ ನುವಾನ್ ತುಷಾರ ಅವರು ದಾವೆಯನ್ನು ಹಿಂಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.

ಕೋರ್ಟ್ನಲ್ಲಿ ದಾವೆ ಹೂಡಿದ್ದರ ಬಗ್ಗೆ ನುವಾನ್ ಎಸ್ಎಲ್ಸಿಯ ಕ್ಷಮೆ ಕೇಳಿದ್ದಾರೆ. ದಾವೆ ಹಿಂಪಡೆಯುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ಎಸ್ಎಲ್ಸಿಯ ಮೂಲಗಳು ತಿಳಿಸಿವೆ.

‘ಮಂಡಳಿಗೆ ಅಗೌರವ ತೋರುವುದು ನನ್ನ ಉದ್ದೇಶವಾಗಿರಲಿಲ್ಲ. ಎನ್ಒಸಿ ನಿರಾಕರಣೆ ನ್ಯಾಯಸಮ್ಮತವಲ್ಲದ ಕ್ರಮ ಎಂಬುದು ನನ್ನ ಭಾವನೆ’ ಎಂದು ಎಲ್ಎಲ್ಸಿಗೆ ಬರೆದ ಇ–ಮೇಲ್ನಲ್ಲಿ ಆರ್ಸಿಬಿ ತಂಡದ ಆಟಗಾರ ತಿಳಿಸಿದ್ದಾರೆ ಎನ್ನಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-51-635783522

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.