ಮುಲ್ಲನಪುರ: ಇಲ್ಲಿ ನಡೆದ ಐಪಿಎಲ್ 2026ರ 29ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡವು 54 ರನ್ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಪಂಜಾಬ್ ತಂಡವು ಉತ್ತಮ ಮೊತ್ತವನ್ನು ಕಲೆಹಾಕುವಲ್ಲಿ ಆರಂಭಿಕ ಆಟಗಾರ ಪ್ರಿಯಾಂಶ್ ಆರ್ಯ ನೆರವಾದರು.

ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಗೆಲುವು ಸಾಧಿಸಿ, 2026 ಟೂರ್ನಿಯಲ್ಲಿ ಸತತ 5 ಪಂದ್ಯಗಳನ್ನು ಗೆಲ್ಲುವ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 254 ರನ್ ಕಲೆಹಾಕಿತು. ಗುರಿ ಬೆನ್ನತ್ತಿದ ಲಖನೌ ಸೂಪರ್ ಜೈಂಟ್ಸ್ ತಂಡವು 200 ರನ್ ಗಳಿಸಿ ಸೋಲೊಪ್ಪಿಕೊಂಡಿತು.

ಈ ಬೃಹತ್ ಮೊತ್ತವನ್ನು ಕಲೆಹಾಕುವಲ್ಲಿ ಯುವ ಆಟಗಾರ ಪ್ರಿಯಾಂಶ್ ಆರ್ಯ ಪ್ರಮುಖ ಪಾತ್ರವಹಿಸಿದರು. ಪ್ರಿಯಾಂಶ್ ಆರ್ಯ 37 ಎಸೆತಗಳಲ್ಲಿ 4 ಬೌಂಡರಿ, 9 ಸಿಕ್ಸರ್ ಸಹಿತ 93 ರನ್ಗಳನ್ನು ಬಾರಿಸಿದರು. ಆದರೆ ಶತಕಕ್ಕೆ ಕೇವಲ 7 ರನ್ಗಳು ಬೇಕಾಗಿರುವಾಗ ವಿಕೆಟ್ ಒಪ್ಪಿಸಿದರು.

ಇದೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ತಮ್ಮ ಮೊದಲ ಅರ್ಧಶತಕವನ್ನು ಪ್ರಿಯಾಂಶ್ ದಾಖಲಿಸಿದ್ದಾರೆ. ಎರಡನೇ ವಿಕೆಟ್ಗೆ ಕೂಪರ್ ಕನೊಲಿ ಅವರು 81 ಎಸೆತಗಳಲ್ಲಿ ದಾಖಲೆಯ 181 ರನ್ಗಳ ಜೊತೆಯಾಟವಾಡಿದರು. ಈ ಮೂಲಕ ಪಂಜಾಬ್ ತಂಡವು ಬೃಹತ್ ಮೊತ್ತ ಕಲೆಹಾಕಲು ಸಹಕಾರಿಯಾಯಿತು.

2025 ರ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಐಪಿಎಲ್ಗೆ ಪಾದಾರ್ಪಣೆ ಮಾಡಿದರು. ಪ್ರಿಯಾಂಶ್ ಆರ್ಯ ಇವರೆಗೆ ಐಪಿಎಲ್ನಲ್ಲಿ 22 ಪಂದ್ಯಗಳನ್ನಾಡಿದ್ದು, 28.24 ಸರಾಸರಿಯಲ್ಲಿ 689 ರನ್ಗಳನ್ನು ಬಾರಿಸಿದ್ದಾರೆ. ಇದರಲ್ಲಿ 4 ಅರ್ಧಶತಕ 1 ಶತಕ ಸೇರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.